ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೊರಟ ಜಾರಕಿಹೋಳಿ ಹೋಗಿದ್ದೆಲ್ಲಿ ಗೊತ್ತಾ…?
ಸಚಿವ ರಮೇಶ್ ಜಾರಕಿಹೊಳಿಯವರು ಸೆಕ್ಸ್ ಸಿಡಿ ಬಿಡುಗಡೆಯ ನಂತ್ರ, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ.. ದಿಢೀರ್ ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿರುವಂತ ಅವರು, ಬಿಜೆಪಿ ಹೈಕಮಾಂಡ್ ಭೇಟಿ ಮಾಡೋದಕ್ಕೆ ದೆಹಲಿಗೆ ಹೋಗ್ತೀನಿ ಅಂತ ಹೇಳಿ ತೆರಳಿದ್ದಾರೆ. ಹೀಗಾಗಿ ಸಚಿವ ರಮೇಶ್ ಜಾರಕಿಹೊಳಿ ಹೈಕಮಾಂಡ್ ಭೇಟಿ ಮಾಡ್ತೀನಿ ಅಂತ ಹೋಗಿದ್ದೆಲ್ಲಿಗೆ ಎಂಬುದೇ ಈಗ ತೀವ್ರ ಕುತೂಹಲ ಮೂಡಿಸಿದ್ದಾರೆ.
ಇತ್ತ ಸಚಿವ ರಮೇಶ್ ಜಾರಕಿಹೊಳಿ ಮಾತ್ರ, ಸಿಡಿ ಫೇಕ್ ವೀಡಿಯೋ ಆಗಿದೆ. ಇದಕ್ಕೆ ನಾನು ರಾಜೀನಾಮೆ ಕೊಡೋದಿಲ್ಲ ಎಂಬುದಾಗಿ ಪ್ರತಿಕ್ರಿಯಿಸಿ, ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಇದಾದ ಬಳಿಕ ದಿಢೀರ್ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾಗಿದ್ದ ಅವರು, ಬಿಜೆಪಿ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳುತ್ತಿರೋದಾಗಿ ಹೇಳಿ, ಹೊರಟಿದ್ದಾರೆ. ಹೀಗಾಗಿ ಸಚಿವ ರಮೇಶ್ ಜಾರಕಿಹೊಳಿ ಹೀಗೆ ಹೇಳಿ ಎಲ್ಲಿಗೆ ಹೋಗಿದ್ದು ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ.
ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು ನಾನು ಯಾವ ತಪ್ಪೂ ಮಾಡಿಲ್ಲ. ತಪ್ಪಿತಸ್ಥ ಎಂದು ದೃಢಪಟ್ಟರೆ ಆಗ ರಾಜೀನಾಮೆಯ ಪ್ರಶ್ನೆ ಉದ್ಭವಿಸುತ್ತದೆ ಎಂದಿದ್ದಾರೆ. ರಾಸಲೀಲೆ ವಿಡಿಯೋ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಸಿಎಂಗೆ ಮನವಿ ಮಾಡುತ್ತೇನೆ. ಈ ಸುದ್ದಿ ಬಿತ್ತರವಾಗುವಾಗ ನಾನು ಮೈಸೂರಿನಲ್ಲಿದ್ದೆ. ನೋಡಿ ಆಶ್ಚರ್ಯವಾಯಿತು. ಪಾಪ, ಆ ದೃಶ್ಯಗಳಲ್ಲಿ ಇರುವ ಯುವತಿ ಯಾರು ಅಂತ ನನಗೆ ಗೊತ್ತಿಲ್ಲ. ದಿನೇಶ್ ಕಲ್ಲಹಳ್ಳಿ ಯಾರು ಅಂತಲೂ ಗೊತ್ತಿಲ್ಲ ಎಂದರು. ನನ್ನ ಮೇಲಿನ ಆರೋಪ ಸಾಬೀತಾದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ. ಸಿಎಂ ಬಿಎಸ್ವೈ ಭೇಟಿ ಮಾಡಿದ ಬಳಿಕ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚೆ ನಡೆಸುತ್ತೇನೆಂದು ಹೇಳಿದ್ದಾರೆ.