ಕಾಳಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಬಸ್ಸುಗಳು ಕಲ್ಪಿಸುವತ್ತೆ ಶ್ರೀರಾಮ್ ಸೇನೆಯ ಕಾರ್ಯಕರ್ತರು ಆಗ್ರಹ ಮಾಡಿದ್ದಾರೆ.
ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಹೊಸಳ್ಳಿ ಕ್ರಾಸ್ ದಿಂದ ವಜೀರಗಾoವ್, ಪಸ್ತಪೂರ್, ಹೂವಿನಭಾವಿ, ರಸ್ತಂಪೂರ್ ದಿಂದ ಕನಕಪುರ ವರೆಗೆ ಕಾಳಗಿ ಬಸ್ ಘಟಕದಿಂದ ಕಲ್ಬುರ್ಗಿ ವರೆಗೆ ಪ್ರತಿನಿತ್ಯ ಬೆಳಗ್ಗೆ 9 ಗಂಟೆ, ಮಧ್ಯಾಹ್ನ 2 ಗಂಟೆ ಮತ್ತು ಸಾಯಂಕಾಲ ನಾಲ್ಕು ಗಂಟೆಗೆ ಬಸ್ ಸಂಚರಿಸುವುದರಿಂದ ರೈತರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ನೂತನ ತಾಲೂಕ ವಾಗಿರುವದರಿಂದ. ದಿನನಿತ್ಯದ ತಮ್ಮ ಕೆಲಸ ಕಾರ್ಯಗಳಿಗೆ, ಆಸ್ಪತ್ರೆಗಳಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಎಲ್ಲ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಹಾಗೂ ಶ್ರೀರಾಮ ಸೇನೆಯ ಕಾರ್ಯಕರ್ತರು ಮನವಿ ಪತ್ರವನ್ನು ಘಟಕದ ವ್ಯವಸ್ಥಾಪಕರಿಗೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಗುಂಡಪ್ಪ ಮಾಳಗೆ, ಕಾಳಪ್ಪ ಕರೆಮನೋರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.