ರಾಜ್ಯ ರಾಜಕಾರಣದಲ್ಲಿ ಸಿ.ಡಿ ಭಯ: ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಎಂದ ಬಿ.ಸಿ ಪಾಟೀಲ್

ಹೈಲೈಟ್ಸ್‌:

  • ರಾಜ್ಯ ರಾಜಕಾರಣದಲ್ಲಿ ಸಿ.ಡಿ ಸ್ಫೋಟದ ಭಯ
  • ನ್ಯಾಯಾಲಯದ ಮೊರೆ ಹೋಗಿದ್ದಾರೆ ಆರು ಸಚಿವರು
  • ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಎಂದ ಬಿ.ಸಿ ಪಾಟೀಲ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಸ್ಫೋಟದ ಬೆನ್ನಲ್ಲೇ ಆರು ಸಚಿವರು ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯದ ಮೊರೆ ಹೋಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಸಚಿವ ಬಿ.ಸಿ ಪಾಟೀಲ್‌ ಸ್ಪಷ್ಟನೆ ನೀಡಿದ್ದು, ಸತ್ಯಾಸತ್ಯತೆ ಅರಿಯದೆ ನಮ್ಮ ತೇಜೋವಧೆ ಆಗಬಾರದು ಎಂಬ ದೃಷ್ಟಿಯಲ್ಲಿ , ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ ಎಂದಿದ್ದಾರೆ.

ಸಚಿವರು ಕಾನೂನಿನ ಮೊರೆ ಹೋಗಿರುವುದು ಸುದ್ದಿ ಆಗುತ್ತಿದ್ದಂತೆ ಬಿ.ಸಿ ಪಾಟೀಲ್ ಟ್ವೀಟ್ ಮೂಲಕ ಇದಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ. ‘ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದುಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ. ಆದರೆ ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜವಧೆ ಆಗಬಾರದು ಎಂಬ ದೃಷ್ಟಿಯಲ್ಲಿ , ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ’ ಎಂದಿದ್ದಾರೆ.

ಆದ್ದರಿಂದ ನಾವೆಲ್ಲರೂ ನಮ್ಮ ವಿರುದ್ಧ ಸತ್ಯಾಸತ್ಯತೆ ಅರಿಯದೆ ನಮ್ಮ ವಿರುದ್ಧ ಪ್ರಸಾರ ವಾಗಬಾರದು ಎಂದು ಕೋರ್ಟಿಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದೇವೆ. ಸತ್ಯಮೇವ ಜಯತೆ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ರಮೇಶ್ ಜಾರಕಿಹೊಳಿ ಸಿ.ಡಿ ಬಿಡುಗಡೆ ಆದ ಬೆನ್ನಲ್ಲೇ ಸಚಿವರಾದ ಬಿ.ಸಿ ಪಾಟೀಲ್, ಕೆ.ಸುಧಾಕರ್‌, ಕೆ.ಸಿ ನಾರಾಯಣ ಗೌಡ, ಬೈರತಿ ಬಸವರಾಜ್‌, ಶಿವರಾಂ ಹೆಬ್ಬಾರ್‌ ಹಾಗೂ ಎಸ್‌ಟಿ ಸೋಮಶೇಖರ್‌ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದಾರೆ. ಈ ಅರ್ಜಿ ವಿಚಾರಣೆ ಶನಿವಾರ ನ್ಯಾಯಾಲಯದ ಮುಂದೆ ಬರಲಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *