ಕಾಲೇಜುಗಳ ಅಭಿವೃದ್ಧಿಗೆ ಶ್ರಮಿಸುವೆ : ಬಂಡಿ

ನರೇಗಲ್ಲ, ಫೆ26 : ರೋಣ ಕ್ಷೇತ್ರದ ಎಲ್ಲಾ ಸರ್ಕಾರಿ ಪದವಿ, ಪದವಿಪೂರ್ವ ಕಾಲೇಜುಗಳ ಸಮಗ್ರ ಮೂಲಭೂತ ಸೌಕರ್ಯ ಕಲ್ಪಿಸಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣ ಒದಗಿಸಲು ಶ್ರಮಿಸುವೆ. ಈಗಾಗಲೇ ಕ್ಷೇತ್ರದ ಕೆಲವೊಂದು ಪದವಿ, ಪಪೂ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವುದು ಗಮನಕ್ಕೆ ಬಂದಿದೆ. ಸರ್ಕಾರದಿಂದ ಕೂಡಲೇ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಶೈಕ್ಷಣಿಕ ಕ್ಷೇತ್ರಕ್ಕೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ರೋಣ ಶಾಸಕ ಕಳಕಪ್ಪ ಬಂಡಿ ಹೇಳಿದರು.
ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಕಾಲೇಜು ಶಿಕ್ಷಣ ಇಲಾಖೆಯ 2.45 ಕೋಟಿ ರೂ.ಗಳ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ 4 ಹೆಚ್ಚುವರಿ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಉಪನ್ಯಾಸಕರಲ್ಲಿ ವೃತ್ತಿಪರತೆಯ ಕೊರತೆಯಿಂದ ಶಿಕ್ಷಣ ಕ್ಷೇತ್ರ ಹಿನ್ನಡೆಗೆ ಕಾರಣವಾಗುತ್ತಿದ್ದು, ಶಿಕ್ಷಕರು ಹಾಗೂ ಉಪನ್ಯಾಸಕರು ಉತ್ತಮ ಬೋಧನಾ ಕೌಶಲ್ಯ ಅಳವಡಿಸಿಕೊಳ್ಳಬೇಕು. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡಿಸಬೇಕಿದೆ. ಸರ್ಕಾರಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ನಿರಂತರ ಶ್ರಮಿಸುತ್ತಿವೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ನರೇಗಲ್ಲ ಪಟ್ಟಣದಲ್ಲಿ ಸರ್ಕಾರಿ ಪದವಿ ಕಾಲೇಜ ಪ್ರಾರಂಭಿಸಲಾಗಿತ್ತು. ದೇಶದ ಅಭಿವೃದ್ಧಿಯಲ್ಲಿ ಉತ್ತಮ ಶಿಕ್ಷಣ ಹಾಗೂ ಸಾಕ್ಷರತೆ ಪ್ರಮಾಣ ಪ್ರಮುಖವಾಗಿದೆ ಎಂದರು.
ಈವೇಳೆ ಪಟ್ಟಣದ ಕೆ.ಎಸ್.ಎಸ್. ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಜರುಗಿದ ಗಜೇಂದ್ರಗಡ ತಾಲೂಕ ಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟವನ್ನು ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು. ಪ.ಪಂ ಅಧ್ಯಕ್ಷೆ ಅಕ್ಕಮ್ಮ ಮಣ್ಣೊಡ್ಡರ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ರೋಣ ತಾಲೂಕಾ ಬಿಜೆಪಿ ಮಂಡಲ ಅಧ್ಯಕ್ಷ ಮುತ್ತಪ್ಪ ಕಡಗದ, ಶ್ರೀಶೈಲಪ್ಪ ಬಂಡಿಹಾಳ, ಮಲ್ಲಿಕಸಾಬ ರೋಣದ, ಈರಪ್ಪ ಜೋಗಿ, ಫಕೀರಪ್ಪ ಮಳ್ಳಿ, ದಾವುದಲಿ ಕುದರಿ, ಜ್ಯೋತಿ ಪಾಯಪ್ಪಗೌಡ್ರ, ವಿಶಾಲಾಕ್ಷಿ ಹೊಸಮನಿ, ಸುಮಿತ್ರಾ ಕಮಲಾಪೂರ, ವಿಜಯಲಕ್ಷ್ಮೀ ಚಲವಾದಿ, ಮಂಜುಳಾ ಹುರಳಿ, ಮುಖಂಡರಾದ ಯಲ್ಲಪ್ಪ ಮಣ್ಣೊಡ್ಡರ, ಮೌನೇಶ ಹೊಸಮನಿ, ಬಸವರಾಜ ವಂಕಲಕುಂಟಿ, ಆನಂದ ಕುಲಕರ್ಣಿ, ರಾಮಣ್ಣ ಸಕ್ರೋಜಿ, ಪುನೀತ ಬೆನಕನವಾರಿ, ಅಶೋಕ ಕಳಕೊಣ್ಣವರ ಸೇರಿದಂತೆ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಇದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *