ಐಪಿಎಲ್ ಟೂರ್ನಿಗೆ ಮುಹೂರ್ತ ಫಿಕ್ಸ್..! ಏಪ್ರಿಲ್ 9 ರಿಂದ ಶುರುವಾಗಲಿದೆ IPL ಫೀವರ್..!
ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯ್ತಿದ್ದ 2021ರ ಐಪಿಎಲ್ ಟೂರ್ನಿಗೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 9 ರಿಂದ ಐಪಿಎಲ್ ಹಬ್ಬ ಶುರುವಾಗಲಿದ್ದು, ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನರೇಂದ್ರ ಮೋದಿ ಮೈದಾನದಲ್ಲಿ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯ ನಡೆಯಲಿದೆ.
ಐಪಿಎಲ್ ಟೂರ್ನಿಯ 14ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. 2 ವರ್ಷಗಳ ನಂತ್ರ ಐಪಿಎಲ್ ಟೂರ್ನಿ ಭಾರತದಲ್ಲಿ ನಡೆಯಲಿದೆ. ಏಪ್ರಿಲ್ 9 ರಂದು ಚೆನ್ನೈನಲ್ಲಿ ಉದ್ಘಾಟನೆಗೊಳ್ಳಲಿರುವ ಐಪಿಎಲ್ 2021, ಮೇ.30ಕ್ಕೆ ಅಹಮ್ಮದಾಬಾದ್‌ನಲ್ಲಿ ಅಂತ್ಯಗೊಳ್ಳಲಿದೆ. ಇನ್ನು, ಕೊರೋನಾ ಕಾರಣ ಕೆಲವು ನಗರಗಳಲ್ಲಿ ಟೂರ್ನಿ ಆಯೋಜಿಸಲಾಗಿದೆ.
ಏಪ್ರಿಲ್ 9ರಂದು ಚೆನ್ನೈನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಚರ್ಸ್ ಬೆಂಗಳೂರು ಮಧ್ಯೆ ಮ್ಯಾಚ್ ನಡೆಯಲಿದೆ. ಪ್ರತಿ ತಂಡವು ಲೀಗ್ ಹಂತದಲ್ಲಿ ನಾಲ್ಕು ಸ್ಥಳಗಳಲ್ಲಿ ಆಡಲಿದೆ. 56 ಲೀಗ್ ಪಂದ್ಯಗಳಲ್ಲಿ ಚೆನ್ನೈ, ಮುಂಬೈ, ಕೋಲ್ಕತಾ ಮತ್ತು ಬೆಂಗಳೂರು ತಲಾ 10 ಪಂದ್ಯಗಳನ್ನು ಆತಿಥ್ಯ ವಹಿಸಲಿದ್ದು, ಅಹಮದಾಬಾದ್ ಮತ್ತು ದೆಹಲಿ ತಲಾ 8 ಪಂದ್ಯಗಳನ್ನು ಆಯೋಜಿಸಲಿದೆ.
ಏಪ್ರಿಲ್ 9ರಿಂದ ಚೆನ್ನೈನಲ್ಲಿ ಈ ಬಾರಿ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಮೊದಲ ಮ್ಯಾಚ್ ನಡೆಯಲಿದೆ. ಅಭಿಮಾನಿಗಳು ಐಪಿಎಲ್ಗೆ ಎದುರು ನೋಡುತ್ತಿದ್ದು, ಈ ಭಾರೀ ರಾಯಲ್ ಚಾಲೆಂಚರ್ಸ್ ಬೆಂಗಳೂರು ಕಪ್ ಗೆಲ್ಲುತ್ತಾ ಕಾದು ನೋಡಬೇಕಿದೆ.