2021-22ನೇ ಸಾಲಿನ ರಾಜ್ಯ ಬಜೆಟ್ ಗಾತ್ರ ಎರಡೂವರೆ ಲಕ್ಷ ಕೋಟಿ, ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 43 ಸಾವಿರದ 734 ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕೃಷಿ ಮತ್ತು ಪೂರಕ ಚಟುವಟಿಕೆ, ಆರ್ಥಿಕಾಭಿವೃದ್ಧಿ, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ಬೆಂಗಳೂರು ಸಮಗ್ರ ಅಭಿವೃದ್ಧಿ, ಸಂಸ್ಕೃತಿ, ಪರಂಪರೆ, ನೈಸರ್ಗಿಕ ಸಂಪನ್ಮೂಲ ಎಂದು ವಿಂಗಡನೆ ಮಾಡಿ ಮಂಡನೆ ಮಾಡಲಾಗುತ್ತಿದೆ.
ಈ ಬಾರಿ ಬಜೆಟ್ನಲ್ಲಿ ಮಠಗಳಿಗೂ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ.50 ಕೋಟಿ. ಕಿತ್ತೂರು ಕೋಟಿ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ನಡೆಸಲು ಅನುದಾನ ಒದಗಿಸಲಾಗಿದೆ. ವಿಜಯಪುರ ಜಿಲ್ಲೆ ಬಸನವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ ರೂ.5 ಕೋಟಿ ನೀಡಲಾಗಿದೆ.