ಮಾರ್ಚ್ 16 ರಂದು ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು…!
ಸಿಎಂ ಬಿ.ಎಸ್. ಯಡಿಯೂರಪ್ಪ ಸೋಮವಾರ ರಾಜ್ಯ ಸರ್ಕಾರದ ಬಜೆಟ್ ಮಂಡಿಸಿದ್ದು, ಇಂತಹ ಬಜೆಟ್ ನಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ.
ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸಾರಿಗೆ ನೌಕರರು ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮಾರ್ಚ್16 ರಂದು ಮತ್ತೆ ಪ್ರತಿಭಟನೆಗೆ ಸಾರಿಗೆ ನೌಕರರು ಮುಂದಾಗಿದ್ದಾರೆ ಎನ್ನಲಾಗಿದೆ.
ಬಜೆಟ್ ನ್ಲಲಿ ಸಾರಿಗೆ ನೌಕರರ ಬೇಡಿಕೆಗಳು ಈಡೇರಿಕೆಯಾಗಿಲ್ಲ. ಡಿಸೆಂಬರ್ 4 ರಂದು ಮುಷ್ಕರದ ವೇಳೆ ರಾಜ್ಯ ಸರ್ಕಾರಕ್ಕೆ 10 ಬೇಡಿಕೆಗಳನ್ನು ಈಡಲಾಗಿತ್ತು. ಈ ವೇಳೆ ಸರ್ಕಾರ ಸರ್ಕಾರಿ ನೌಕರರನ್ನಾಗಿಸುವುದನ್ನು ಬಿಟ್ಟು 9 ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿತ್ತು. ಆದರೆ ಬಜೆಟ್ ನಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಮಾರ್ಚ್ 16 ರಂದು ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ.