Ramesh Jarkiho: ಸಚಿವ ಸ್ಥಾನ ಕಳೆದುಕೊಂಡ ‘ಸಾಹುಕಾರ್’ಗೆ ಬಿಜೆಪಿಯಿಂದ ಮತ್ತೊಂದು ಶಾಕ್!
ಬೆಂಗಳೂರು: ಸಿಡಿ ಪ್ರಕರಣದ ಸಂಬಂಧ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ ಎನ್ನಲಾಗಿದೆ.
ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಸಿಡಿ ಪ್ರಕರಣ(CD Case) ಸಂಬಂಧ ಈಗಾಗಲೇ ರಮೇಶ್ ಜಾರಕಿಹೊಳಿಯಿಂದ ಬಿಜೆಪಿ ಸಚಿವ ಸ್ಥಾನ ಪಡೆದುಕೊಂಡಿದ್ದರು. ಇದೀಗ ಬಿಜೆಪಿ ರಮೇಶ್ ಜಾರಕಿಹೊಳಿಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದೆ ಎನ್ನಲಾಗಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಮೇಶ್ ಜಾರಕಿಹೊಳಿ(Ramesh Jarkiholi) ಅವರನ್ನು ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ನೇಮಕವಾಗಿದ್ದರು. ಆದರೆ ಬೆಳಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಿಡಿ ಪ್ರಕರಣವನ್ನು ಪ್ರಸ್ತಾಪಿಸಲಿದ್ದು, ಇದರಿಂದ ಬಿಜೆಪಿಗೆ ಮುಜುಗರ ತಪ್ಪಿಸುವ ಸಲುವಾಗಿ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರದಿಂದ ದೂರ ಇಡಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.