ಸಿನಿಮಾ ಮಂದಿರಗಳಲ್ಲಿ ಶೇ.50 ಪ್ರೇಕ್ಷಕರಿಗೆ ಅವಕಾಶ ಪ್ರಸ್ತಾಪ ಇಲ್ಲ: ಸಿಎಂ
ಬೆಂಗಳೂರು : ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.
ಸದ್ಯಕ್ಕೆ ನಿಟ್ಟಿಸಿರು:
ಚಿತ್ರಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆ ಸ್ಟಾರ್ ನಟರ ಚಿತ್ರಗಳ ನಿರ್ಮಾಪಕರ ನಿಟ್ಟಿಸಿರು ಬಿಡುವಂತಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾಪ ಸಲ್ಲಿಸಿತ್ತು.
ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿರಸ್ಕರಿಸಿದ್ದಾರೆ.