ಕಲಬುರಗಿ : ಕೊರೋನಾ ಸೋಂಕಿನಿಂದ ಇಬ್ಬರು ವೃದ್ಧೆಯರು ನಿಧನ:147 ಪಾಸಿಟಿವ್
ಕಲಬುರಗಿ : ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ವೃದ್ಧೆಯರು ನಿಧನರಾಗಿದ್ದಾರೆ ಎಂದು ಶನಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಹಳೇ ಜೇವರ್ಗಿ ರಸ್ತೆಯ ಉಮರ್ ಮಸೀದಿ ಹತ್ತಿರ ಪ್ರದೇಶದ ನಿವಾಸಿ 70 ವರ್ಷದ ವೃದ್ಧೆ ಮಾ. 24 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಮಾ.26 ರಂದು ನಿಧನ ಹೊಂದಿದ್ದಾರೆ.
ಅದೇ ರೀತಿ ಸಾರಿ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಆಳಂದ ತಾಲೂಕಿನ ಬೆಳಮಗಿ ಗ್ರಾಮದ 75 ವರ್ಷದ ವೃದ್ಧೆ ಮಾ.23 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಮಾ.27 ರಂದು ನಿಧನ ಹೊಂದಿರುವ ಬಗ್ಗೆ ಅರೋಗ್ಯ ಬುಲೆಟಿನ್ ಖಚಿತಪಡಿಸಿದೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 339 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 147 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 23399 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 61 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22234 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.826 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.