ಕಲಬುರಗಿ : ಜಯಂತಿ ಹಿನ್ನೆಲೆ:ಏ.1 ರಂದು ಡಿ.ಸಿ. ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಕಲಬುರಗಿ : ಬರುವ ಏಪ್ರಿಲ್ ಮಾಹೆಯಲ್ಲಿ ದೇಶದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಡಿ.ಸಿ. ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏಪ್ರಿಲ್ 1 ರಂದು ಮಧ್ಯಾಹ್ನ 12 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಪೂರ್ವಭಾವಿ ಸಭೆಗೆ ನಗರದಲ್ಲಿನ ಗಣ್ಯ ವ್ಯಕ್ತಿಗಳು, ಸಂಘ-ಸಂಸ್ಥೆಗಳ ಮುಖಂಡರು ಆಗಮಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ. ಅಲ್ಲಾಭಕ್ಷ ಅವರು ಕೋರಿದ್ದಾರೆ.