ಕಲಬುರಗಿ : ಭೀಮಾ ನದಿಗೆ ನೀರು ಹರಿಸಲು ಮನವಿ
ಕಲಬುರಗಿ : ಮಹಾರಾಷ್ಟ್ರದ ಉಜನಿ ಡ್ಯಾಮ್ ನಿಂದ ಭೀಮಾ ನದಿಗೆ ನೀರು ಬಿಡುವಂತೆ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ (ಹೆಚ್.ಕೆ.ಇ) ನಿರ್ದೇಶಕ ಅರುಣಕುಮಾರ ಎಂ.ವೈ.ಪಾಟೀಲ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಅವರಿಗೆ ಮನವಿಪತ್ರ ಸಲ್ಲಿಸಿರುವ ಅವರು, ಭೀಮಾನದಿಯಲ್ಲಿ ನೀರಿಲ್ಲ, ಇದರಿಂದಾಗಿ ನದಿ ತೀರದ ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಈ ಕಾರಣಕ್ಕಾಗಿ ಉಜನಿ ಡ್ಯಾಮ್ ನಿಂದ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಅಲ್ಲದೆ ರೈತರಿಗೆ ವಿದ್ಯುತ್ ಸಮಸ್ಯೆ ಯಾಗದಂತೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ, ಜೇಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ ಉಪಸ್ಥಿತರಿದ್ದರು.