ಕಲಬುರಗಿ : ಕೊರೋನಾ ಸೋಂಕಿನಿಂದ ವೃದ್ಧ ನಿಧನ:144 ಪಾಸಿಟಿವ್
ಕಲಬುರಗಿ : ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಓರ್ವ ವೃದ್ಧ ನಿಧನರಾಗಿದ್ದಾರೆ ಎಂದು ಗುರುವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆ ಜೊತೆಗೆ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಅವರಾದ (ಬಿ) ಗ್ರಾಮದ 65 ವರ್ಷದ ವೃದ್ಧ ಮಾ.28 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಮಾ.31 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 344 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 144 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 24113 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 103 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22525 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.1244 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.