ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ
ಮುಂಬೈ – ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸದ್ಯ ದೀಪಿಕಾ ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿದ್ದಾರೆ.
ಲಾಕ್ ಡೌನ್ ಮುಂಚಿತವಾಗಿ ದೀಪಿಕಾ ಮತ್ತು ರಣವೀರ್ ಸಿಂಗ್ ಕುಟುಬದ ಜತೆ ಕೆಲ ದಿನಗಳ ಕಾಲ ಕಳೆಯಲು ಬೆಂಗಳೂರಿಗೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.
ದೀಪಿಕಾ ಪಡುಕೋಣೆ ಕುಟುಂಬದ ಎಲ್ಲ ಸದಸ್ಯರಿಗೂ ಸೋಂಕು ತಗುಲಿದೆ. ಖ್ಯಾತ ಬ್ಯಾಡ್ಮಿಂಟನ್ ತಾರೆ ಪ್ರಕಾಶ್ ಪಡುಕೋಣೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕಾಶ್ ಅವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಒಂದು ವಾರ ಕಳೆದರೂ ಜ್ವರ ಕಡಿಮೆಯಾಗಿರಲಿಲ್ಲ. ಹೀಗಾಗಿ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕಾಶ್ ಪಡುಕೋಣೆ ಅವರ ಪತ್ನಿ ಉಜ್ವಲ ಹಾಗೂ ಎರಡನೇ ಪುತ್ರಿಗೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ. ಅವರು ಮನೆಯಲ್ಲೇ ಐಸೋಲೆಟ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.