ಕಲಬುರಗಿ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಮತ್ತ ವೆಂಟಿಲೇಟರ ಬ್ಯಾಂಕ್ ಸ್ಥಾಪಿಸುವಂತೆ ಸಿಪಿಐ-ಎಂ ಪಕ್ಷದಿಂದ ವತ್ತಾಯ
ಹೌದು ಈಗಾಗಲೇ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅತಿವೇಗವಾಗಿ ಹರಡುತ್ತಿರುವುದರ ಜೊತೆಗೆ ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಕ್ಸಿಜನ್, ವೆಂಟಿಲೇಟರ್, ಬೆಡ್ ಇರದೇ ನರಳಾಡಿ ಸಾಯುವ ಸ್ಥಿತಿಗಳು ಕಣ್ಮುಂದೆ ಕಾಣುತ್ತಿದೆ. ಅದರಲ್ಲೂ ಕಲಬುರ್ಗಿ ಜಿಲ್ಲೆಯಲ್ಲಿ ಕೂಡ ಈ ಸಮಸ್ಯೆ ಹೆಚ್ಚಾಗಿ ಕಾಣುತ್ತಿರುವ ಉದಾಹರಣೆಗಳಿವೆ. ಆದರೆ ಜಿಲ್ಲಾಧಿಕಾರಿಗಳು ಮಾತ್ರ ಹಾರಿಕೆಯ ಉತ್ತರಗಳನ್ನು ನೀಡುತ್ತಿದ್ದಾರೆ. ಕೂಡಲೇ ಕಲಬುರಗಿಯ ಜಿಲ್ಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಡಬೇಕೆಂದು. ಸಿಪಿಐಎಂ ಪಕ್ಷದ ಕಾಳಗಿ ತಾಲೂಕ ಘಟಕದ ಸಂಚಾಲಕರಾದ ಗುರುನಂಜೇಶ್ವರ ಕೋಣಿನ್, ಕಾಳಗಿ ತಹಸೀಲ್ದಾರರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಮತ್ತು ಪ್ರಧಾನಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.