Complete Lock Down : ಮೇ 10 ರಿಂದ 25 ರವರೆಗೆ ರಾಜ್ಯದಲ್ಲಿ ಸಂಪೂರ್ಣ ‘ಲಾಕ್ ಡೌನ್’!
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 25 ರವರೆಗೆ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ.
ಇಂದು ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ನೇತೃತ್ವದಲ್ಲಿ ಸಚಿವರ ಜೊತೆಗೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ 15 ದಿನ ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಬಾಕಿ ಇದೆ. ಇಂದು ಸಂಜೆ ವೇಳೆಗೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸೋಮವಾರದಿಂದ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್(Complete Lock Down) ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ಯಾಕೇಜ್, ನೆರವು ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.