20 ಸಾವಿರ ಆಕ್ಸಿಜನ್ ಬೆಡ್ ಹೆಚ್ಚಿಸಲು ನಿರ್ಧಾರ:ಡಿಸಿಎಂ
ಸುಪ್ರೀಂಕೋರ್ಟ್ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಸರಕಾರವು ಆಕ್ಸಿಜನ್ ಬೆಡ್ಗಳ ಪ್ರಮಾಣವನ್ನು 20,000 ಹೆಚ್ಚಿಸಲು ಸರಕಾರ ಮುಂದಾಗಿದೆ.
ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಡಾ.ಸಿ.ಎನ್.ಅಶ್ವತ್ಥನಾರಾಯಣ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಒಟ್ಟು 20,000 ಆಕ್ಸಿಜನ್ ಬೆಡ್ಗಳ ಪೈಕಿ ತಕ್ಷಣವೇ ತುರ್ತಾಗಿ 10,000 ಬೆಡ್ ವ್ಯವಸ್ಥೆ ಮಾಡಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಉಂಟಾಗಿರುವ ಆಕ್ಸಿಜನ್ ಬೆಡ್ಗಳ ಹಾಹಾಕಾರ ಕೊಂಚ ಕಡಿಮೆಯಾಗಲಿದೆ ಎಂದರು.
ಕೋವಿಡ್ ಸೋಂಕು ಹರಡುವ ಮುನ್ನ ರಾಜ್ಯದಲ್ಲಿ ದಿನಕ್ಕೆ 100 ಮೆ.ಟನ್ ಆಕ್ಸಿಜನ್ ಮಾತ್ರ ಖರ್ಚಾಗುತ್ತಿತ್ತು. ಆದರೆ, ಈಗ ನಿತ್ಯವೂ 950 ಮೆ.ಟನ್ ಬೇಕಾಗುತ್ತಿದೆ. ಸದ್ಯಕ್ಕಿರುವ ಆಕ್ಸಿಜನ್ ಬೆಡ್ಗಳಿಗೆ ಸಾಕಾಗುವಷ್ಟು ಆಮ್ಲಜನಕ ನಮ್ಮಲ್ಲಿದೆ. ಆದರೆ, ಸೋಂಕಿತರು ಹೆಚ್ಚುತ್ತಿರುವುದರಿಂದ ಅನಿವಾರ್ಯವಾಗಿ ಬೆಡ್ಗಳನ್ನೂ ಹೆಚ್ಚಿಸುವುದರ ಜತೆಗೆ
ಹೆಚ್ಚುವರಿ ಆಮ್ಲಜನಕದ ಅವಶ್ಯಕತೆ ಇದೆ. ಆ ಕೊರತೆ ನ್ಯಾಯಾಲಯದ ಆದೇಶದಿಂದ ನೀಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 70,000 ಬೆಡ್ಗಳನ್ನು ಕೋವಿಡ್ಗೆ ಮೀಸಲಾಗಿ ಇಡಲಾಗಿದ್ದು, ಈ ಪೈಕಿ ಸರಕಾರದಿಂದ 35,000 ಹಾಗೂ ಖಾಸಗಿ ಆಸ್ಪತ್ರೆಗಳ ವತಿಯಿಂದ 35,000 ಬೆಡ್ಗಳಿವೆ. ಈ ಒಟ್ಟು ಬೆಡ್ಗಳ ಪೈಕಿ 50,000 ಆಕ್ಸಿಜನ್ ಬೆಡ್ಗಳಿವೆ ಎಂದರು.