ಕೋವಿಡ್‌ ಲಸಿಕೆ: ಯುವಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ, ಸುಧಾಕರ್‌ ಮನವಿ

ಹೈಲೈಟ್ಸ್‌:

  • ಯುವಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ
  • ಎಲ್ಲರಿಗೂ ಲಸಿಕೆ ನೀಡಲು ರಾಜ್ಯ ಸರ್ಕಾರದಿಂದ ಕ್ರಮ
  • ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಹೇಳಿಕೆ

ಬೆಂಗಳೂರು: ಯುವಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ ಎಂದಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಎಲ್ಲ ನಾಗರೀಕರಲ್ಲಿ, ಅದರಲ್ಲೂ ವಿಶೇಷವಾಗಿ ನನ್ನ ಯುವ ಮಿತ್ರರಲ್ಲಿ ನನ್ನ ಮನವಿ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ ಎಂದು ತಿಳಿಸಿದ್ದಾರೆ.

ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.

ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ ಎಂದಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *