ಲಾಕ್‌ಡೌನ್ ಅವಧಿಯಲ್ಲಿ ಬಡವರಿಗೆ ಹಣಕಾಸಿನ ಪ್ಯಾಕೇಜ್ ನೀಡಿ; ಕಾಂಗ್ರೆಸ್ ಪುನರುಚ್ಚಾರ
ಬೆಂಗಳೂರು: ಲಾಕ್ ಡೌನ್ ಹೇರಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಡವರಿಗೆ ವಿಶೇಷ ಹಣಕಾಸು ಪ್ಯಾಕೇಜ್ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೀದಿ ಬದಿ ವ್ಯಾಪಾರಿಗಳು ಮತ್ತು ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗೆ ಬಡವರಿಗೆ ಖಾತೆಗೆ 10,000 ರೂ.ಗಳನ್ನು ವರ್ಗಾಯಿಸುವ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಆಗ್ರಹಿಸಿದರು.
ರೈತರ ಬೆಳೆಗಳನ್ನು ಖರೀದಿಸುವವರು ಇಲ್ಲ ಮತ್ತು ಸಚಿವರು ಯಾರೂ ರೈತರ ಹೊಲಗಳಿಗೆ ಭೇಟಿ ನೀಡುತ್ತಿಲ್ಲ. ಸರ್ಕಾರ ಕೋವಿಡ್ 3ನೇ ಅಲೆ ಎದುರಿಸಲು ಸಜ್ಜಾಗಿರುವುದಾಗಿ ಹೇಳುತ್ತಿದೆ. ಮೊದಲು ಎರಡನೇ ತರಂಗವನ್ನು ನಿಯಂತ್ರಿಸೋಣ ಎಂದು ವ್ಯಂಗ್ಯವಾಡಿದರು.