ಅಫಜಲಪೂರ: ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಸುಮಾರು 5 ವರ್ಷಗಳಿಂದ ದ್ವೀತಿಯ ದರ್ಜೆ ಸಹಾಯಕರಾಗಿ ನಿರ್ವಹಿಸುತ್ತಿದ್ದ ಗುರುರಾಜ ಮಿರ್ಗಿ (33) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಜ್ವರ ಕಾಣಿಸಿಕೊಂಡಾಗ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಜ್ವರ ಉಲ್ಬಣಗೊಂಡಾಗ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದಾಗ ಇವರಿಗೆ ಕೊರೊನಾ ಸೋಂಕು ತಗುಲಿರುವದು ದೃಢಪಟ್ಟಿತ್ತು. ಚಿಕಿತ್ಸೆ ಫಲಿಸದೇ ಜೀಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಸಾವನ್ನಪ್ಪಿದ್ದಾರೆ.
ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ ಸಂಜೆ 4 ಗಂಟೆಗೆ ಆಲಮೇಲ ಗ್ರಾಮದಲ್ಲಿರುವ ಇವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಗ್ರಾಮದವರಾಗಿದ್ದ ಗುರುರಾಜ, 2002ರಲ್ಲಿ ಕೆ.ಪಿ.ಎಸ್.ಸಿ ಮುಖಾಂತರ ಶಿಕ್ಷಣ ಇಲಾಖೆಯ ದ್ವೀತಿಯ ದರ್ಜೆ ಸಹಾಯಕನಾಗಿ ನೇಮಕಗೊಂಡು ಜೇವರ್ಗಿ, ಅಫಜಲಪುರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.