ತಮಿಳುನಾಡು ಸಿಎಂ ಪಳನಿಸ್ವಾಮಿ ಆಸ್ಪತ್ರೆಗೆ ದಾಖಲು
ಚೆನ್ನೈ :ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿರುವ ತಮಿಳು ನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಚಿಕಿತ್ಸೆ ಪಡೆಯಲು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿಎಂ ಕೆ.ಪಳನಿಸ್ವಾಮಿ(೬೬) ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ ತುರ್ತು ಚಿಕಿತ್ಸೆ ಅವಶ್ಕತೆಯಿದೆ ಇದೆ ಹಿಗಾಗಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸಿಎಂ ಕಚೇರಿಯ ಮೂಲಗಳಿಂದ ತಿಳಿದು ಬಂದಿದೆ.
ಏಪ್ರಿಲ್ ೬ರಂದು ನಡೆದಂತ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಆಡಳಿತಾರೂಡ ಎಐಎಡಿಎಂಕೆ ಪಕ್ಷವನ್ನು ಮತ್ತೊಮ್ಮ ಅಧಿಕಾರಕ್ಕೆ ತರಲು ಸಿಎಂ ಪಳನಿಸ್ವಾಮಿ ಹಗಲಿರುಳು ಪ್ರಚಾರ ನಡೆಸಿದ್ದರು. ಇಂತಹ ಚುನಾವಣಾ ಮತದಾನದ ಮತಏಣಿಕೆ ಕಾರ್ಯ ಮೇ.೨ರಂದು ನಡೆಯಲಿದೆ.