ಬಿ.ಎ.ಬಸವರಾಜ ಮತ್ತು ಡಾ.ಕೆ.ಸುಧಾಕರ ಶುಕ್ರವಾರ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೊಂಕುನ ನಿಯಂತ್ರಣದ ಪರಿಸ್ಥಿತಿ ಯನ್ನು ನಿಭಾಯಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು.
ದಾವಣಗೆರೆ ಜಿಲ್ಲೆಯ ಉಸ್ತುವಾರಿಯನ್ನು ಹೊತ್ತಿರುವ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ ಅವರ ದಿನಾಂಕ 21-5-2021 ಶುಕ್ರವಾರ ಬೆಳಿಗ್ಗೆ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೊಂಕುನ ನಿಯಂತ್ರಣದ ಪರಿಸ್ಥಿತಿ ಯನ್ನು ನಿಭಾಯಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು.
ದಾವಣಗೆರೆ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಪ್ರೊ. ಲಿಂಗಣ್ಣ, ದಾವಣಗೆರೆ ಮಹಾನಗರ ಪಾಲಿಕೆ ಪೌರರು, ಜಿಲ್ಲಾಧಿಕಾರಿ ಶ್ರೀ. ಮಹಾಂತೇಶ್ ಬಿಳಗಿ. ಡಿಎಚ್ಒ ಡಾ.ನಾಗರಾಜ್ ಸೇರಿದಂತೆ ಹಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.