ರೈಲ್ವೆ ಹುದ್ದೆಯಿಂದ ಕುಸ್ತಿಪಟು ಸುಶೀಲ್ ಕುಮಾರ್ ಅಮಾನತು
ನವದೆಹಲಿ : ಕೊಲೆ ಪ್ರಕರಣದಲ್ಲಿ ದೆಹಲಿ ಪೊಲೀಸ್ ಕಸ್ಟಡಿಯಲ್ಲಿರುವ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಉತ್ತರ ರೈಲ್ವೇ ಇಲಾಖೆ ಸರ್ಕಾರಿ ಹುದ್ದೆಯಿಂದ ಅಮಾನತು ಮಾಡಿ ಶಾಕ್ ನೀಡಿದೆ.
ಕುಸ್ತಿಪಟು ಸಾಗರ್ ಧನ್ಕರ್ ಅವರ ಹತ್ಯೆ ಪ್ರಕರಣದಲ್ಲಿ ದೆಹಲಿಯ ಆಪರಾಧ ವಿಭಾಗದ ಅಧಿಕಾರಿಗಳು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಬಂಧಿತ ಸುಶೀಲ್ ಕುಮಾರ್ ಹಾಗೂ ಆತನ ಸಹಚರರು ಪೊಲೀಸರ ವಶದಲ್ಲಿದ್ದಾರೆ.
2015ರಲ್ಲಿ ಸುಶೀಲ್ ಕುಮಾರ್ ಉತ್ತರ ರೈಲ್ವೇ ಇಲಾಖೆಯ ಸೀನಿಯರ್ ಕಮರ್ಷಿಯಲ್ ಮ್ಯಾನೇಜರ್ ಆಗಿದ್ದರು. ಅಲ್ಲದೇ ಶಾಲಾ ಮಟ್ಟದ ಕ್ರೀಡೆಗಳ ಅಭಿವೃದ್ಧಿಯ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ನೇಮಕಗೊಂಡಿದ್ದರು.
ಸರ್ಕಾರಿ ನೌಕರನ ಮೇಲೆ ಕ್ರಿಮಿನಲ್ ಪ್ರಕರಣದಲ್ಲಿ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ. ತನಿಖೆ ಮುಗಿಯುವವರೆಗೂ ಸುಶೀಲ್ ಕುಮಾರ್ ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ. ಮುಂದಿನ ಆದೇಶದವರೆಗೆ ಈ ಹುದ್ದೆಯನ್ನು ಅಮಾನತು ಮಾಡಿಡಲಾಗಿದೆ ಎಂದು ಉತ್ತರ ರೈಲ್ವೇ ತಿಳಿಸಿದೆ.