ಹಿರಿಯ ಸಾಹಿತಿ, ಚಿಂತಕ ಪ್ರೊ. ವಸಂತ ಕುಷ್ಟಗಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಬೆಂಗಳೂರು, ಜೂನ್ 4- ಹಿರಿಯ ಸಾಹಿತಿ, ಚಿಂತಕ ಪ್ರೊ. ವಸಂತ ಕುಷ್ಟಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿ ಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಪ್ರೊ. ಕುಷ್ಟಗಿ ಅವರು ಉತ್ತಮ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳ ಜ್ಞಾನ ದಾಹ ನೀಗಿಸಿದರು. ಸಾಹಿತ್ಯ ಕ್ಷೇತ್ರಕ್ಕೂ ಅವರ ಕೊಡುಗೆ ಗಣನೀಯ ವಾದುದು. ಕಲ್ಯಾಣ ಕರ್ನಾಟಕ ಭಾಗದ ಸಾಹಿತ್ಯ, ಇತಿಹಾಸಗಳ ಕುರಿತು ಅಪಾರ ಜ್ಞಾನ ಹೊಂದಿದ್ದವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.