ವಿದ್ಯುತ್ ದರ ಪ್ರತಿ ಯೂನಿಟ್ ಗೆ 30 ಪೈಸೆ ಏರಿಕೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಜನರು ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನರ ಮೇಲೆ ಬರೆ ಹಾಕಿದೆ.
ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಗೆ ಸರಾಸರಿ 30 ಪೈಸೆ ಹೆಚ್ಚಳಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಬೇಕು ಎನ್ನುವ ನೀಡಿದ ವಿದ್ಯುತ್ ಚ್ಚಕ್ತಿ ಮಂಡಳಿಗಳ ಬೇಡಿಕೆಯನ್ನು ಆಧರಿಸಿ ಪ್ರತಿ ಯೂನಿಟ್ ಗೆ ಸರಾಸರಿ 30 ಪೈಸೆ ಹೆಚ್ಚಳ ಮಾಡಲಾಗಿದೆ.
2021-22 ರಲ್ಲಿ ವಿದ್ಯುತ್ ಕಂಪನಿಗಳ ಬೇಡಿಕೆ ಪೂರೈಕೆ ಸೇರಿದಂತೆ ವಿವಿಧ ವಿಷಯಗಳನ್ನು ಪರಿಗಣಿಸಿ ವಿದ್ಯುತ್ ದರ ಏರಿಕೆ ಮಾಡಿರುವ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ,ಶೇ.3.84 ರಷ್ಟು ಹೆಚ್ಚಳ ಮಾಡಿದೆ.
ರಾಜ್ಯದ ವಿವಿಧ ವಿದ್ಯುಚ್ಛಕ್ತಿ ಸಂಸ್ಥೆಗಳು ಒಂದು ರೂಪಾಯಿ 35 ಪ್ರತಿ ಯೂನಿಟಿಗೆ ದರ ಹೆಚ್ಚಳ ಮಾಡಬೇಕು ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮನವಿ ಸಲ್ಲಿಸಿದವು ಅದನ್ನು ಪರಿಶೀಲಿಸಿ ಆಯೋಗ ಪ್ರತಿ ಯೂನಿಟ್ ಗೆ ಸರಾಸರಿ 30 ಪೈಸೆ ವಿದ್ಯುತ್ ದರ ಹೆಚ್ಚಳ ಮಾಡಿದೆ.
ವಿದ್ಯುತ್ ದರ ಏರಿಕೆ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನ್ವಯವಾಗಲಿದೆ.
ಈಗಾಗಲೇ ಕೊರೋನಾ ಸೋಂಕಿನಿಂದ ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದು ಅವರ ಮೇಲೆ ಮತ್ತಷ್ಟು ಗಾಯದ ಮೇಲೆ ಬರೆಯುವಂತಾಗಿದೆ.
ಸಿದ್ದು ವಿರೋದ

ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಜನರು ತತ್ತರಿಸಿಹೋಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವ ಕ್ರಮವನ್ನು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಸಂಕಷ್ಟದ ಸಮಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಆಘಾತ ತಂದಿದೆ ಕೂಡಲೇ ಸರ್ಕಾರ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.
ವಿದ್ಯುತ್ ದರ ಏರಿಕೆಯಿಂದಾಗಿ ಜನಸಾಮಾನ್ಯರು ಕೈಗಾರಿಕೆಗಳ ಮೇಲೆ ಭಾರಿ ಹೊಡೆತ ಬೀಳಲಿದೆ ಹೀಗಾಗಿ ಸರ್ಕಾರ ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರ ಆಧಾರ ಕಂಪನಿಯಿಂದ ವಿದ್ಯುತ್ ಖರೀದಿ ಮಾಡುವ ಸಲುವಾಗಿ ಅವರಿಗೆ ಅನುಕೂಲ ಮಾಡಿಕೊಡಲು ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.