ಕೋವಿಡ್ ಅನ್‌ಲಾಕ್: ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಿಎಸ್‌ವೈ ಚರ್ಚೆ

ಹೈಲೈಟ್ಸ್‌:

  • ಜಿಲ್ಲೆಗಳ ಕೋವಿಡ್‌ ಸ್ಥಿತಿಗತಿಗಳ ಕುರಿತು ಮಾಹಿತಿ
  • ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು, ಬೆಳಗಾವಿ ಡಿಸಿಗಳು ಭಾಗಿ
  • ಪ್ರಕರಣಗಳು ಹೆಚ್ಚಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಅನ್ ಲಾಕ್ ಹಿನ್ನೆಲೆಯಲ್ಲಿ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸುತ್ತಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಜಿಲ್ಲೆಗಳ ಕೋವಿಡ್ ಸ್ಥಿತಿಗತಿಗಳ ಕುರಿತಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಕೋವಿಡ್ ಹೆಚ್ಚಿರುವ ಎಂಟು ಜಿಲ್ಲೆಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳ ಸಿಎಂ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಈ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಅನ್ ಲಾಕ್ ಪ್ರಕ್ರಿಯೆ ಸಂದರ್ಭದಲ್ಲಿ ಏನು ಕ್ರಮ ಕೈಗೊಳ್ಳಬಹುದು ಎಂಬ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ.

ಜೂನ್ 14 ರ ಬಳಿಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು ಪ್ರಕ್ರಿಯೆ ಆರಂಭ ಆಗಲಿದೆ. ಹಂತ ಹಂತವಾಗಿ ಲಾಕ್ ಡೌನ್ ತೆರವು ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ತಜ್ಞರು ಕೂಡಾ ಅನ್ ಲಾಕ್ ಬಗ್ಗೆ ಕೆಲವೊಂದು ಶಿಫಾರಸುಗಳನ್ನು ಮಾಡಿದ್ದಾರೆ.

ಆದರೆ, ಕೋವಿಡ್ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸಬೇಕಾ ಅಥವಾ ಕೆಲವೊಂದು ರಿಯಾಯಿತಿ ‌ನೀಡಬೇಕಾ ಎಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ವರ್ಚುವಲ್ ಸಭೆಯಲ್ಲಿ ಸಚಿವ ಸುಧಾಕರ್, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವ ನಾರಾಯಣ ಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *