ಸಿಎಂ ಹುದ್ದೆ ಖಾಲಿಯಿಲ್ಲ ಬೋರ್ಡ್ ಹಾಕ್ಕೊಂಡು ಓಡಾಡಬೇಕು:ಶೆಟ್ಟರ್
ಹುಬ್ಬಳ್ಳಿ – ಮುಖ್ಯಮಂತ್ರಿ ಬದಲಾವಣೆ ವಿಚಾರ ಮೇಲಿಂದ ಮೇಲೆ ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂಬುದಾಗಿ ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಡರ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಅರವಿಂದ್ ಬೆಲ್ಲದ್ ಮುಖ್ಯಮಂತ್ರುಯಾಗುವ ವಿಚಾರದಲ್ಲಿ ತಾವೇನೂ ಹೇಳಲು ಬಯಸುವುದಿಲ್ಲ. ಈ ವಿಚಾರವಾಗಿ ಪಕ್ಷದಲ್ಲಿ ಯಾರಾದರೂ ಕೆಮ್ನಿದ್ರೆ ತಾವು ಹೊಣೆ ಆಗಬೇಕಾದ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.
ಅರವಿಂದ ಬೆಲ್ಲದ್ ಮುಂದಿನ ಸಿಎಂ ವಿಚಾರ ರಾಜ್ಯಮಟ್ಟದಲ್ಲಿ ಚರ್ಚೆಯಾಗಿದೆ. ಯಾರ ಹಣೆಯಲ್ಲಿ ಏನು ಇರುತ್ತದೋ ಅದು ಆಗುತ್ತದೆ. ಹೈಕಮಾಂಡ್ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಅರವಿಂದ ಬೆಲ್ಲದ್ ನಿಮ್ಮನ್ನು ಓವರ್ ಟೇಕ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್, ಬೆಲ್ಲದ್ ಅವರ ಸ್ವಭಾವ ಆಗಿದೆ ಎನ್ನುವ ಮೂಲಕ ಪರೋಕ್ಷವಾಗಿ ಬೇಸರ ಹೊರಹಾಕಿದರು.