ಶಾಸಕ ಸ್ಥಾನಕ್ಕೆ ಜಾರಕಿಹೊಳಿ ರಾಜೀನಾಮೆ ನೀಡುತ್ತಾರೆಂಬುದು ಸುಳ್ಳು ಸುದ್ದಿ..! ಅಥಣಿ ಶಾಸಕ ಮಹೇಶ್ ಕುಮಟಳ್ಳಿ
ಬರಿ ವಿವಾದಗಳಲ್ಲೆ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅತ್ಯಾಚಾರ ಆರೋಪದ ಹಿನ್ನಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಡಿ ವಿಚಾರದ ಆರೋಪ ಇಂದಿಗೂ ಅಂತ್ಯವನ್ನು ಕಂಡಿಲ್ಲ, ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಹೀಗಿರುವಾಗಲೇ ಸಾಹುಕಾರ್ ಸಚಿವ ಸಂಪುಟಕ್ಕೆ ಮರು ಸೇರ್ಪಡೆಯಾಗಲು ಒಂದಲ್ಲ ಒಂದು ಪ್ರಯತ್ನವನ್ನು ಮಾಡುತ್ತಿದ್ದಾರೆ.

ಈ ಹಿನ್ನಲೆ ಪಕ್ಷದ ನಾಯಕರ ಮೇಲೆ ಒತ್ತಡದ ತಂತ್ರವನ್ನೇರಲು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆ ಮಾತುಕತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ ಆಪ್ತ ಸ್ನೇಹಿತ ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರು ಜಾರಕಿಹೊಳಿ ಪಕ್ಷವನ್ನು ತೊರೆಯುವುದಿಲ್ಲ. ಅವರಿಗೆ ಅಂತಹ ಆಲೋಚನೆಗಳೂ ಇಲ್ಲ.


