ಅಕ್ರಮ ಮರಳು ಅಡ್ಡೆಗೆ ಮಧ್ಯರಾತ್ರಿ ದಾಳಿ ನಡೆಸಿದ ಬಂಟ್ವಾಳ ತಹಶೀಲ್ದಾರ್‌ ನೇತೃತ್ವದ ತಂಡ

ಹೈಲೈಟ್ಸ್‌:

  • ಬಂಟ್ವಾಳ ತಹಶೀಲ್ದಾರ್‌ ನೇತೃತ್ವದಲ್ಲಿ ಮಿಡ್‌ನೈಟ್‌ ಆಪರೇಷನ್
  • ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿ
  • ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ದಾಳಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಮರಳು ಅಡ್ಡೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಲಾಗಿದೆ.

ದಾಳಿ ವೇಳೆ ಮರಳುಗಾರಿಕೆಗೆ ಬಳಸಲಾಗುತ್ತಿರುವ ಆರೋಪದಲ್ಲಿ ಎರಡು ಬೋಟ್ ಮತ್ತು ಟಿಪ್ಪರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30ರ ಬಳಿಕ ಈ ಕಾರ್ಯಾಚರಣೆಯನ್ನು ಕಂದಾಯ ಇಲಾಖೆಯ ತಂಡ ಅರಣ್ಯ ಇಲಾಖೆ ಮತ್ತು ನಗರ ಠಾಣೆ ಪೊಲೀಸರ ಸಹಯೋಗದೊಂದಿಗೆ ನಡೆಸಿದ್ದು, ದಾಳಿ ವೇಳೆ ಇಬ್ಬರು ಪರಾರಿಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಹಲವೆಡೆ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *