ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಸರಳ ಆಚರಣೆ
ಕಲಬುರಗಿ,ಜೂ.27.(ಕ.ವಾ)- ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ರವಿವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುಡ ಒಕ್ಕಲಿಗ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ
ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ತಹಶೀಲ್ದಾರ್ ಪ್ರಕಾಶ್ ಕುದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಕುಡ ಒಕ್ಕಲಿಗ ಸಮಾಜದ ರಾಜ್ಯ ಉಪಾಧ್ಯಕ್ಷ ಶಿವರಾಜ ಪಾಟೀಲ್ ಕಲಗುರ್ತಿ, ಜಿಲ್ಲಾಧ್ಯಕ್ಷ ಶಿವಯೋಗಪ್ಪ ಚಿತ್ತಾಪುರ, ಉಪಾಧ್ಯಕ್ಷರಾದ ಮಲ್ಲಣ್ಣಗೌಡ ಬಿ.ಪಾಟೀಲ್ ಮಳ್ಳಿ, ಕಲ್ಯಾಣರಾವ ವೈ. ಘಾಣೂರೆ, ಅಣ್ಣಾರಾವ ಡಿ. ಪಾಟೀಲ್, ಪ್ರಧಾನ ಕಾರ್ಯದರ್ಶಿ ನಾಗಣ್ಣಗೌಡ ಪಾಟೀಲ್, ಕಾರ್ಯದರ್ಶಿ ಜಗದೀಶ ಎಸ್. ಮೊಂಗೊಂಡ ಕೊಡದೂರ ಸೇರಿದಂತೆ ಸಮಾಜದ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.