ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯಧನ ಪರಿಷ್ಕರಣೆ

ಬೆಂಗಳೂರು‌ -ಕಾರ್ಮಿಕ ಕಲ್ಯಾಣ ಮಂಡಳಿ ಸಹಾಯಧನ ಮತ್ತು ಹೆರಿಗೆ ಭತ್ಯೆ ದರಗಳನ್ನು ಪರಿಷ್ಕರಿಸಲಾಗಿದ್ದು, ಪ್ರಸ್ತುತ ಜಾರಿಯಲ್ಲಿ ಇರುವ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಪಡೆಯಲು ಈಗಿರುವ ವೇತನ ಮಿತಿ 15,000 ರೂ. ನಿಂದ 21,000 ರೂ. ಏರಿಕೆ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.
ಈ ಮೂಲಕ ಕಾರ್ಮಿಕ ವರ್ಗಕ್ಕೆ ರಾಜ್ಯ ಸರ್ಕಾರ ಭರಪೂರ ಕೊಡುಗೆ ನೀಡಿದೆ.
ಈ ಯೋಜನೆ ಇನ್ನಷ್ಟು ಕಾರ್ಮಿಕರನ್ನು ತಲುಪಲಿದೆ. ಈಗಿರುವ ಕಾರ್ಮಿಕ ವೈದ್ಯಕೀಯ ನೆರವಿನ ಮೊತ್ತವನ್ನು 10,000 ರೂ. ನಿಂದ 25,000 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕಾರ್ಮಿಕರ ಅಪಘಾತ ಧನ ಸಹಾಯವನ್ನು 3,000 ರೂ. ನಿಂದ 10000 ರೂ.ಗೆ ಏರಿಕೆ ಮಾಡಲಾಗಿದೆ ಎಂದು‌‌ ಅವರು ತಿಳಿಸಿದ್ದಾರೆ.
ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
90ನೇ ಸಭೆಯ ನಿರ್ಣಯಗಳನ್ನು ಇಲಾಖೆ ಜಾರಿ ಮಾಡಿದ್ದು, ಈ ಮೂಲಕ ಸಹಾಯಧನದಲ್ಲಿ ಭಾರೀ ಪ್ರಮಾಣದ ಏರಿಕೆ ಮಾಡಿ ಆದೇಶಿಸಿದ್ದು, ಹೆಚ್ಚಿನ ಕಾರ್ಮಿಕರಿಗೆ ಸವಲತ್ತು ದೊರಕುವಂತೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ಜಾರಿ ಮಾಡುತ್ತಿರುವ ಈ ಕಲ್ಯಾಣ ಯೋಜನೆಗಳು ಸಂಘಟಿತ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗದವರಿಗೆ ಲಭ್ಯವಿದ್ದು, ಈ ಸಹಾಯಧನ ಏರಿಕೆ ನಿರ್ಣಯದಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಶೈಕ್ಷಣಿಕ ಪ್ರೋತ್ಸಾಹ ಯೋಜನೆಯಡಿ ಇಲಾಖೆಯು 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ, ಡಿಪ್ಲೋಮಾ ಐಟಿಐ ಕೋರ್ಸ್ ಗೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿAಗ್ ಮತ್ತು ವೈದ್ಯಕೀಯ ಕೋರ್ಸ್ ಗಳಿಗೆ ಒಂದು ಕುಟುಂಬ ಓರ್ವ ವಿದ್ಯಾರ್ಥಿಗೆ ವಾರ್ಷಿಕ ಧನ ಸಹಾಯ ನೀಡುವ ಯೋಜನೆಯ ಮಾಸಿಕ ಆದಾಯ ಮಿತಿಯನ್ನು ಏರಿಕೆ ಮಾಡಿ ಹೆಚ್ಚಿನ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ.
ಮೃತ ಕಾರ್ಮಿಕನ ಅಂತ್ಯ ಸಂಸ್ಕಾರಕ್ಕೆ ನೀಡುತ್ರಿದ್ದ
ಧನ ಸಹಾಯವನ್ನೂ ಏರಿಕೆ ಮಾಡಲಾಗಿದ್ದು, 5,000 ರೂ. ನಿಂದ ಧನ ಸಹಾಯವನ್ನು ದ್ವಿಗುಣ ಗೊಳಿಸಿ 10,000 ರೂ.ಗೆ ನಿಗದಿಪಡಿಸಲಾಗಿದೆ ಶ ಎಂದು ತಿಳಿಸಿದರು.
ವಾರ್ಷಿಕವಾಗಿ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಟ್ರೇಡ್ ಯೂನಿಯನ್ ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತಿದ್ದ ಧನ ಸಹಾಯದಲ್ಲಿ ಭಾರೀ ಏರಿಕೆ ಮಾಡಲಾಗಿದ್ದು, ಈ ಧನ ಸಹಾಯವನ್ನು 30000 ರೂ ನಿಂದ 1 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ.
ಸಂಘಟಿತ ಮಹಿಳಾ ಕಾರ್ಮಿಕರಿಗೆ ಮೊದಲ ಎರಡು ಮಕ್ಕಳಿಗೆ ತಲಾ 10,000 ರೂ. ಹೆರಿಗೆ ಭತ್ಯೆ ನೀಡುವಂತಹ ಮಹತ್ವ ನಿರ್ಧಾರವನ್ನೂ ಇಲಾಖೆ ಕೈಗೊಂಡಿದ್ದು, ವಾರ್ಷಿಕ ಕ್ರೀಡಾಕೂಟ ಧನ ಸಹಾಯವನ್ನು 50000 ರೂ. ನಿಂದ 1 ಲಕ್ಷಕ್ಕೆ ಏರಿಕೆ ಮಾಡಲಾಗಿದ ಎಂದು‌ ಶಿವರಾಂ ವಿವರಿಸಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *