ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ರವರ ವಾಕ್ಸಮರ ತಾರಕಕ್ಕೆ ಏರಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾನು ಬೇರೆಯವರ ಜಗಳದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ತಮ್ಮ ಮನೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್, ಯಾರ ಜಗಳದಲ್ಲೂ ಮಧ್ಯಪ್ರವೇಶಿಸುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕೆಆರ್ಎಸ್ ಬಿರುಕು ವಿಚಾರ ನೋಡಿಕೊಳ್ಳಲು ಸರ್ಕಾರ ಇದೆ , ಸಚಿವಾಲಯ ಇದೆ ಹಾಗೂ ತಂತ್ರಜ್ಞರ ತಂಡವಿದೆ. ಇವರೆಲ್ಲ ಪರಿಶೀಲನೆ ಮಾಡಿ ವಾಸ್ತವತೆಯನ್ನ ಹೇಳಬೇಕು.
ಬಿರುಕು ಬಿಟ್ಟಿದೆ ಎಂದು ಹೇಳಿ ಜನರಲ್ಲಿ ಆತಂಕ ಮೂಡಿಸುವುದು ನಮ್ಮ ಕೆಲಸವಲ್ಲ. ಜನರಲ್ಲಿ ಭಯ ಹುಟ್ಟಿಸುವ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ಭಾಗಿಯಾಗುವುದಿಲ್ಲ ಎಂದು ಹೇಳಿದ ಡಿಕೆಶಿ ಅವರು ಜಗಳ ಮಾಡಿಕೊಂಡರೆ ಅದರ ಬಗ್ಗೆ ನಾನ್ಯಾಕೆ ಮಾತನಾಡಲಿ?’ ಎಂದು ಟಕ್ಕರ್ ಹೊಡೆದಿದ್ದಾರೆ. ಪರೋಕ್ಷವಾಗಿ ಸುಮಲತಾ ಡ್ಯಾಂ ಬಿರುಕು ವಿಚಾರಕ್ಕೆ ಟಾಂಗ್ ಕೊಟ್ಟಿದ್ದಾರೆ.