ದೇಶದಲ್ಲಿ 60 ಸಾವಿರ ಕಿ.ಮೀ ವಿಶ್ವದರ್ಜೆಯ ರಸ್ತೆ ನಿರ್ಮಾಣದ ಗುರಿ: ಗಡ್ಕರಿ
ನವದೆಹಲಿ, ಜು.10- ದೇಶದಲ್ಲಿ 60 ಸಾವಿರ ಕಿಲೋಮೀಟರ್ ಉದ್ದದ ವಿಶ್ವದರ್ಜೆಯ ರಸ್ತೆಯನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಪ್ರತಿ ದಿನ 40 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಾಣ ಸೇರಿದಂತೆ 2024ರ ವೇಳೆ ಈ ಗುರಿ ಸಾಧಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಭಾರತೀಯ ರಸ್ತೆ ಅಭಿವೃದ್ಧಿ ಕುರಿತ 16ನೇ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದೇಶಾದ್ಯಂತ ಅತ್ಯುತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ 63 ಲಕ್ಷ ಕಿಲೋಮೀಟರ್ ಉದ್ದದ ರಸ್ತೆ ಸಂಪರ್ಕ ಹೊಂದಿದೆ ಅದರಲ್ಲಿ 60 ಸಾವಿರ ಕಿಲೋಮೀಟರ್ ಉದ್ದದ ರಸ್ತೆಯನ್ನು ವಿಶ್ವದರ್ಜೆಯ ರಸ್ತೆಯನ್ನಾಗಿ ಭಾರತದ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
111ಲಕ್ಷ ಕೋಟಿ ವೆಚ್ಚ:
ದೇಶದಲ್ಲಿ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 111 ಲಕ್ಷ ಕೋಟಿ ರೂಪಾಯಿಯನ್ನು ಖರ್ಚು ಮಾಡುತ್ತಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮುಂದಿನ ಎರಡು ವರ್ಷಗಳಲ್ಲಿ 15 ಲಕ್ಷ ಕೋಟಿ ರೂಪಾಯಿಯನ್ನು ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ರಸ್ತೆ ಅಭಿವೃದ್ಧಿ ಮತ್ತು ಸಚಿವಾಲಯ ಕಾರ್ಯ ಮಾಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವಿಶ್ವದರ್ಜೆಯ ರಸ್ತೆ ಅಭಿವೃದ್ಧಿ ಮಾಡುವುದರಿಂದ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸುಲಭವಾಗಿ ಸಂಚಾರಕ್ಕೆ ಅನುಕೂಲವಾಗುವಂತೆ ಗೆ ಸರಕುಸಾಗಾಣಿಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ದೇಶದ ಹಲವು ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ಮತ್ತಷ್ಟು ವೇಗ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.