ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಾಗಿ ಆಯ್ಕೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಪದ್ಮ ಸರಣಿಯ ಪ್ರಶಸ್ತಿಗಳಿಗೆ ಇದೇ ಮೊದಲ ಬಾರಿಗೆ ಜನಾಭಿಪ್ರಾಯ ಸಂಗ್ರಹಿಸಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತದಲ್ಲಿ ಬಹಳಷ್ಟು ಮಂದಿ ಪ್ರತಿಭಾನ್ವಿತರಿದ್ದಾರೆ.
ತಳಮಟ್ಟದಲ್ಲಿ ಅವರು ಅತ್ಯುತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅವರ ಸೇವೆ ಬಹುಶಃ ನಮಗೆ ಗೊತ್ತಿರುವುದಿಲ್ಲ ಅಥವಾ ಕೇಳಿರುವುದಿಲ್ಲ. ಅಂತಹ ಸ್ಫೂರ್ತಿದಾಯಕ ವ್ಯಕ್ತಿಗಳ ಬಗ್ಗೆ ನಿಮಗೆ ಮಾಹಿತಿ ಇದ್ದರೆ ಅವರನ್ನು ಪದ್ಮ ಸರಣಿಯ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಿ ಎಂದು ಕರೆ ನೀಡಿದ್ದಾರೆ.
ಹ್ಯಾಶ್‍ಟ್ಯಾಗ್ ಪೀಪಲ್ಸ್ ಪದ್ಮ (#peoplespadma)ಮೂಲಕ ನಾಗರಿಕರು ಪದ್ಮ ಸರಣಿಯ ಪ್ರಶಸ್ತಿಗಳಿಗೆ ಸಾಧಕರನ್ನು ಗುರುತಿಸಬಹುದಾಗಿದೆ. ಸೆ.15ರ ಒಳಗೆ ಸಾರ್ವಜನಿಕರ ಅಭಿಪ್ರಾಯಗಳನ್ನು padmaawards.gov.in ವೆಬ್‍ಸೈಟ್‍ಗೆ ಸಲ್ಲಿಸಬಹುದಾಗಿದೆ ಎಂದು ಮೋದಿ ಅವರು ತಿಳಿಸಿದ್ದಾರೆ.