ಮೈಸೂರಿನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಆರೋಪ: ತನಿಖೆಗೆ ಗೃಹ ಸಚಿವರ ಆದೇಶ
ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚನೆ ಪ್ರಕರಣ ಕೇಸು ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಮೈಸೂರು ಪೊಲೀಸರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಆದೇಶ ಹೊರಡಿಸಿದ್ದಾರೆ. ದರ್ಶನ್ ಮತ್ತು ಗ್ಯಾಂಗ್ ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ದೂರು ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದಾಗ ನಿರ್ಮಾಪಕ ಮತ್ತು ಉದ್ಯಮಿ ಸಂದೇಶ್ ನಾಗರಾಜ್ ನನಗೆ ಟಿವಿ ನೋಡಿದ ಮೇಲೆಯೇ ಗೊತ್ತಾಗಿದ್ದು, ಹಲ್ಲೆ ನಡೆದ ಪ್ರಕರಣ ನನ್ನ ಗಮನಕ್ಕೆ ಬಂದೇ ಇಲ್ಲ, ನನಗೆ ಯಾರು ದೂರು ನೀಡಲೂ ಇಲ್ಲ ಎಂದಿದ್ದಾರೆ.