ವಿಮಾನ ಅಪಘಾತದ ಬಳಿಕ ಪ್ರಧಾನಿ, ಗೃಹ ಸಚಿವ, ವಿದೇಶಾಂಗ ಸಚಿವ, ರಕ್ಷಣಾ ಸಚಿವರು ಹೇಳಿದ್ದೇನು?

ಕೇರಳದ ಕೋಜಿಕೋಡ್‌ನ ಕರಿಪುರ ವಿಮಾನ ನಿಲ್ದಾಣದಲ್ಲಿ ದೊಡ್ಡ ವಿಮಾನ ಅಪಘಾತ ಸಂಭವಿಸಿದ ನಂತರ ದೇಶದ ಪ್ರಧಾನಿ, ಗೃಹ ಸಚಿವ, ವಿದೇಶಾಂಗ ಸಚಿವರು ಮತ್ತು ರಕ್ಷಣಾ ಸಚಿವರು ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ:  ಏರ್ ಇಂಡಿಯಾ ವಿಮಾನ ಕೇರಳದ ರನ್‌ವೇಯಲ್ಲಿ ಜಾರಿಬಿದ್ದಿದೆ. ದುಬೈನಿಂದ ಕೋಜಿಕೋಡ್‌ಗೆ (Kozhikode) ಬರುತ್ತಿದ್ದ ವಿಮಾನ ಕೇರಳದ ಕೋಜಿಕೋಡ್‌ನಲ್ಲಿ ರನ್‌ವೇಯಲ್ಲಿ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ ಒಟ್ಟು 191 ಜನರು ಇದ್ದರು. ವಿಮಾನ ಅಪಘಾತದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ದುಃಖ ವ್ಯಕ್ತಪಡಿಸಿದ್ದಾರೆ.

ಕೇರಳ ಸಿಎಂ ಜೊತೆ ಪಿಎಂ ಮೋದಿ ಮಾತು:
ಈ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ದುಃಖ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಕೋಜಿಕೋಡ್‌ನಲ್ಲಿನ ವಿಮಾನ ಅಪಘಾತದಿಂದ ನನಗೆ ನೋವಾಗಿದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ದುಃಖದಲ್ಲಿ ನಾವೂ ಇದ್ದೇವೆ. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲೆಂದು ಆಶಿಸುತ್ತೇನೆ. ನಾನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ಸಹಾಯ ದೊರೆಯುತ್ತಿದೆ ಎಂದು ತಿಳಿಸಿದ್ದಾರೆ.

ಅಮಿತ್ ಶಾ ಕೂಡ ದುಃಖ ವ್ಯಕ್ತಪಡಿಸಿದರು:
ಘಟನೆ ನಡೆದ ಕೂಡಲೇ ದೇಶದ ಗೃಹ ಸಚಿವ ಅಮಿತ್ ಷಾ (Amit Shah) ಅವರ ಪ್ರತಿಕ್ರಿಯೆ ಬಂದಿತು. ಕೇರಳದ ಕೋಜಿಕೋಡ್‌ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ದುರಂತ ಅಪಘಾತದ ಬಗ್ಗೆ ತಿಳಿದು ನನಗೆ ಬಹಳ ದುಃಖವಾಗಿದೆ. ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ ಸಂತ್ರಸ್ತರನ್ನು ರಕ್ಷಿಸುವಂತೆ ಎನ್‌ಡಿಆರ್‌ಎಫ್‌ಗೆ ನಿರ್ದೇಶಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಅಪಘಾತದ ನಂತರ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ವಿವರವಾದ ವರದಿಗಾಗಿ ಕಾಯುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಅದೇ ಸಮಯದಲ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಮಾನ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ, ಕೇರಳದಲ್ಲಿ ವಿಮಾನ ಅಪಘಾತವು ದುಃಖಕರವಾಗಿದೆ ಎಂದು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್ ಅನೇಕ ಜನರು ಏರ್ ಇಂಡಿಯಾ ವಿಮಾನದಲ್ಲಿದ್ದರು, ಮೃತರ ಸಂಬಂಧಿಕರಿಗೆ ನನ್ನ ಸಂತಾಪಗಳು. ಗಾಯಗೊಂಡವರಿಗೆ ಶೀಘ್ರದಲ್ಲೇ ಚೇತರಿಸಿಕೊಳ್ಳುವಂತೆ ಶುಭ ಹಾರೈಸುತ್ತೇನೆ ಎಂದು ಬರೆದಿದ್ದಾರೆ.

ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು ಕೋಜಿಕೋಡ್‌ನಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ಐಎಕ್ಸ್ 1344 ರ ದುರಂತದಿಂದ ತೀವ್ರ ದುಃಖಿತರಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ.

 

MEA ಸಹಾಯವಾಣಿ 24×7 ಮುಕ್ತವಾಗಿದೆ:

1800 118 797
+91 11 23012113
+91 11 23014104
+91 11 23017905
Fax: +91 11 23018158
Email: covid19@mea.gov.in

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *