ನಾಯಕತ್ವ ಬದಲಾವಣೆ ಗೊತ್ತಿಲ್ಲ: ಬಿಎಸ್ ವೈ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಳಿಗೆ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ತಮಗೇನೂ ಗೊತ್ತಿಲ್ಲ ಎಂದು ಮುಗುಳ್ನಕ್ಕರು.
ಬಯಲು ಸೀಮೆಗೆ ನೀರನ್ನು ಒದಗಿಸುವ, ಬಹು ದಿನಗಳ ಕನಸಾಗೆ ಉಳಿದಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಕೋರಿಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿವಾದಿತ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಮುಖ್ಯಮಂತ್ರಿಯವರ ಕಾರ್ಯದರ್ಶಿ ಗಿರೀಶ್ ಹೊಸೂರ್ ಇದೇ ವೇಳೆ ಜೊತೆಗಿದ್ದರು.
ದೆಹಲಿಯ ಕರ್ನಾಟಕ ಭವನದಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿದ್ದರು ನೂತನ ಸಚಿವರಾದ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಭಗವಂತ ಖೂಬಾ ಪಾಲ್ಗೊಂಡಿದ್ದರು.