ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ವಿರೋಧಿ ಬಣಕ್ಕೆ ಬಿ ಎಸ್ ಯಡಿಯೂರಪ್ಪ ಖಡಕ್ ಸಂದೇಶ

ನವದೆಹಲಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ರಾಜೀನಾಮೆ ಕೊಡಿ ಅಂತ ಹೈಕಮಾಂಡ್ ಕೇಳಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ವಿರೋಧಿ ಬಣಕ್ಕೆ ಖಡಕ್ ಸಂದೇಶ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಾನು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಬೆಳವಣಿಗೆ, ಮಾಡುತ್ತಿರುವ ಕೆಲಸಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಿದ್ದೇನೆ. ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ಇಲ್ಲಿಗೆ ಬರುತ್ತೇನೆ, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುವುದು ಶುದ್ಧ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ. ಈ ಮೂಲಕ ದೆಹಲಿಯಿಂದಲೇ ಸಿಎಂ ಯಡಿಯೂರಪ್ಪ ವಿರೋಧಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ.

ಮೇಕೆದಾಟು ಯೋಜನೆ ಮಾಡಿಯೇ ಸಿದ್ದ: ಇದೇ ಸಂದರ್ಭದಲ್ಲಿ ಮೇಕೆದಾಟು ಯೋಜನೆಯನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಯೋಜನೆ ಕರ್ನಾಟಕ ಮತ್ತು ತಮಿಳು ನಾಡು ಅಣ್ಣತಮ್ಮಂದಿರಂತೆ ಇರಲು ಒಂದು ಉತ್ತಮ ಅವಕಾಶ, ಆದ್ದರಿಂದ ಮೇಕೆದಾಟು ಯೋಜನೆಗೆ ಅಗತ್ಯ ಅನುಮತಿಯನ್ನು ಪಡೆದುಕೊಳ್ಳುತ್ತೇನೆ. ಇದರಿಂದ ಪಕ್ಕದ ರಾಜ್ಯಗಳಿಗೆ ತೊಂದರೆ ಇಲ್ಲದಿರುವುದರಿಂದ ಮೇಕೆದಾಟು ಯೋಜನೆಗೆ ಅವಕಾಶ ಮಾಡಿಕೊಡುವಂತೆ ಸಂಬಂಧಪಟ್ಟ ಸಚಿವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಯಾವುದೇ ರೀತಿಯ ಗೊಂದಲಗಳಿಲ್ಲ ಎಂದರು.

ಇಂದು ಕೇಂದ್ರದ ಹಿರಿಯ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಕೂಡ ಭೇಟಿ ಮಾಡಿ ಬೆಂಗಳೂರಿಗೆ ಹಿಂತಿರುಗುತ್ತೇನೆ ಎಂದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *