ಉಪ ಚುನಾವಣೆ : 12 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

  • ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ 29 ಜನ
  •  29 ಜನರ ಪೈಕಿ 17 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದು, 12 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಹಾವೇರಿ (ಅ.112):  ಹಾನಗಲ್ಲ (Hanagal) ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ (By Election) ಉಮೇದುವಾರಿಕೆ ಸಲ್ಲಿಸಿದ್ದ 29 ಜನರ ಪೈಕಿ 17 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದು, 12 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿವೆ.

ಹಾನಗಲ್ಲ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಿತು. ನಾಮಪತ್ರ ಸಲ್ಲಿಕೆಯ ಕೊನೆಯ ದಿನದ ವರೆಗೆ 29 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರ ಹಿಂಪಡೆಯಲು ಅ. 13 ಕೊನೆಯ ದಿನವಾಗಿದೆ. ಅ. 30ರಂದು ಮತದಾನ ನಡೆಯಲಿದ್ದು, ನ. 2ರಂದು ಮತ ಎಣಿಕೆ ಜರುಗಲಿದೆ.

ಸ್ವೀಕೃತವಾದ ಅಭ್ಯರ್ಥಿಗಳ ನಾಮಪತ್ರ:  ನಿಯಾಜ್‌ ಶೇಖ್‌ (ಜೆಡಿಎಸ್‌), ಶಿವರಾಜ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್‌), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ(ರೈತ ಭಾರತ ಪಕ್ಷ), ಶಿವಕುಮಾರ ತಳವಾರ (ಲೋಕಶಕ್ತಿ ಪಕ್ಷ), ಅಶೋಕ ಪಾಂಡಪ್ಪ ಅಣಜಿ, ಉಮೇಶ ದೈವಜ್ಞ, ಚನ್ನಪ್ಪ ಬಳ್ಳಾರಿ, ಜಾಕೀರ್‌ ಹುಸೇನ್‌ ಮೌಲಾಲಿ ಅರಳಿಮರದ, ನಜೀರ ಅಹ್ಮದ ಸವಣೂರ, ಪರಶುರಾಮ ಹೊಂಗಲ, ಸಿಕಂದರ್‌ ಖಾನ್‌ ಮೋದಿನಖಾನ್‌ ಮತ್ತಿಹಳ್ಳಿ, ಸಿದ್ದಪ್ಪ ಕಲ್ಲಪ್ಪ ಪೂಜಾರ, ಸಿದ್ದಪ್ಪ ಸಣ್ಣನಿಂಗಪ್ಪ ದೊಡ್ಡಲಿಂಗಣ್ಣನವರ, ಸೋಮಶೇಖರ ಮಹದೇವಪ್ಪ ಕೋತಂಬರಿ, ಹೊನ್ನಪ್ಪ ಅಕ್ಕಿವಳ್ಳಿ (ಪಕ್ಷೇತರರು).

ಬಿಜೆಪಿ ಟಿಕೆಟ್ 

ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿ ಬಸವರಾಜ ಬೊಮ್ಮಾಯಿ  (BasavarajBommai) ಆ ಸ್ಥಾನ ಅಲಂಕರಿಸಿದ ಬಳಿಕ ಎದುರಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (Karnataka BY Election) ಅಖಾಡ ಸಜ್ಜಾಗಿದೆ.

ಉಭಯ ಕ್ಷೇತ್ರಗಳಿಗೆ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ಈಗಾಗಲೇ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುವುದರಿಂದ ಇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಆಡಳಿತಾರೂಢ ಬಿಜೆಪಿ (BJP) ಗುರುವಾರ ತನ್ನ ಅಭ್ಯರ್ಥಿಗಳ ಪಟ್ಟಿಬಿಡುಗಡೆಗೊಳಿಸಿದೆ.

 

ಈ ತಿಂಗಳ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ವಾಪಸ್‌ ಪಡೆಯಲು 13 ಕೊನೆಯ ದಿನವಾಗಿದೆ. ಈ ತಿಂಗಳ 30ರಂದು ಮತದಾನ ನಡೆಯಲಿದೆ. ಫಲಿತಾಂಶ ನ.2ರಂದು ಹೊರಬೀಳಲಿದೆ. ಸಿಂದಗಿಯ ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ನ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ ಅವರ ಅಕಾಲಿಕ ನಿಧನದ ಹಿನ್ನೆಲೆ ಇದೀಗ ಉಪಚುನಾವಣೆ ಎದುರಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

 ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್‌ ವಿಧಾಸಭಾ ಕ್ಷೇತ್ರಗಳಿಗೆ ಉಪಚುನಾವಣೆ (By Election) ದಿನಾಂಕ ಘೋಷಣೆಯಾಗಿದೆ. ಇದಕ್ಕೆ ಇದೀಗ ಕಾಂಗ್ರೆಸ್ ತನ್ನ ಅಭ್ಯರ್ಥಿ ಹೆಸರುಗಳನ್ನ ಘೋಷಣೆ ಮಾಡಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್‌ ಮಾನೆ ಅವರನ್ನು ಕಾಂಗ್ರೆಸ್ (Congress) ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

 

ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ. ಮನಗೂಳಿ ಅವರ ನಿಧನದಿಂದ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ರೆ, ಬಿಜೆಪಿ ಶಾಸಕರಾಗಿದ್ದ ಸಿ.ಎಂ. ಉದಾಸಿ ಅವರ ಅಕಾಲಿಕ ನಿಧನದಿಂದ ಹಾನಗಲ್ ವಿಧಾನಸಭಾ ಕ್ಷೇತ್ರ ಬೈ ಎಲೆಕ್ಷನ್ ಘೋಷಣೆಯಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *