ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಕಲಬುರಗಿ(ಅ.13): ಕಲಬುರಗಿ ಲಘು ಭೂಕಂಪನ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಹಾನಿಪೀಡಿತ ಪ್ರದೇಶಗಳಲ್ಲಿ ಪುನರ್ವಸತಿ ಕೇಂದ್ರಗಳನ್ನ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಅಂತ ಹೇಳಿದ್ದಾರೆ. ಸತತ ಎರಡು ದಿನಗಳಿಂದ ಲಘು ಭೂಕಂಪನದ ಬಗ್ಗೆ ವರದಿಯಾಗಿದೆ. SDRF ಹಾಗೂ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದ್ದೇನೆ. ಈ ಕುರಿತು ಮಾಹಿತಿ ನೀಡಲು ತಿಳಿಸಿದ್ದೇನೆ ಅಂತ ಹೇಳಿದ್ದಾರೆ.