Petrol diesel price today: ಗ್ರಾಹಕರ ಜೇಬು ಖಾಲಿ ಮಾಡುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಗಳು..!
ನವದೆಹಲಿ: ಭಾನುವಾರದವರೆಗೆ ಸತತ 4 ದಿನಗಳವರೆಗೆ ಏರಿಕೆ ಕಂಡ ನಂತರ ಇಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೆ ಬದಲಾವಣೆಯಾಗಿಲ್ಲ. ಆಯಿಲ್ ಮಾರ್ಕೆಟಿಂಗ್ ಕಂಪನಿಗಳು (OMC) ಕೊನೆಯದಾಗಿ ಅ.17 ರಂದು ಇಂಧನ ದರದಲ್ಲಿ ಪರಿಷ್ಕರಣೆ ಮಾಡಿದ್ದವು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 105.84 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ 94.57 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 111.77 ರೂ. ಇದ್ದರೆ, ಪ್ರತಿ ಲೀಟರ್ ಡೀಸಲೆ ಬೆಲೆ 102.52 ರೂ. ಇದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 109.53 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ 100.37 ರೂ. ಇದೆ.
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.43 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ 97.68 ರೂ. ಇದೆ. ತಮಿಳುನಾಡಿನ ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.01 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ 98.92 ರೂ. ಇದೆ. ಹೈದರಾಬಾದ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 110.09 ಮತ್ತು ಡೀಸೆಲ್ 103.08 ರೂ. ಇದೆ. ಪೆಟ್ರೋಲ್ ಈಗ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ 100 ರೂ. ಗಡಿ ದಾಟಿದೆ. ಡೀಸೆಲ್ ಡಜನ್ಗಿಂತಲೂ ಹೆಚ್ಚು ರಾಜ್ಯಗಳಲ್ಲಿ ಶತಕ ಭಾರಿಸಿದೆ. ದಿನಬಳಕೆ ವಸ್ತುಗಳ ಜೊತೆಗೆ ಇಂಧನ ದರಗಳ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ.
ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.