Congress Meeting: ಪೆಟ್ರೋಲ್​ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್​ ಸಜ್ಜು; ಇಂದು ರೂಪುರೇಷ ಸಭೆ

ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ (International Oil Market) ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ (Unemployment), ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendara Modi) ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರವು ನಿರಂತರವಾಗಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಹೆಚ್ಚಳ ಮಾಡುತ್ತಿದೆ. ಈ‌ ಹಿನ್ನೆಲೆಯಲ್ಲಿ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ (Congress) ನವೆಂಬರ್ 14ರಿಂದ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ (AICC Head Quarters) ಇಂದು ನಡೆಯುವ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ (Pradesh Congress Samiti) ಅಧ್ಯಕ್ಷರು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ (AICC General Secretaries) ಸಭೆಯಲ್ಲಿ ರೂಪು ರೇಶೆಗಳನ್ನು ನಿರ್ಧರಿಸಲಾಗುತ್ತದೆ.

ಪ್ರತಿಭಟನೆ ತೀವ್ರಗೊಳಿಸಲು ತೀರ್ಮಾನ
ದೇಶಾದ್ಯಂತ ಹಲವು ಸಮಸ್ಯೆಗಳಿದ್ದು ಜನ‌ ತೀವ್ರ ಸಂಕಷ್ಟದಲ್ಲಿದ್ದಾರೆ. ಕಷ್ಟದಲ್ಲಿ ಇರುವ ಜನರ ನೆರವಿಗೆ ಬರುವ ಬದಲು ಕೇಂದ್ರ ಬಿಜೆಪಿ ಸರ್ಕಾರ (Union Government) ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಹೆಚ್ಚಳ ಮಾಡಿ ಇನ್ನಷ್ಟು‌ ಹೊರೆ ಏರುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚೆಚ್ಚು ತೆರಿಗೆ ಹಾಕಿ ಜನರಿಂದ ಹಣವನ್ನು ಲೂಟಿ ಮಾಡುತ್ತಿದೆ. ಸರ್ಕಾರದ ಬೊಕ್ಕಸ ತುಂಬಿಸಿಕೊಳ್ಳಲು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಅಲ್ಲಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಈಗ ಪ್ರತಿಭಟನೆಯನ್ನು ತೀವ್ರಗೊಳಿಸಿ ನವೆಂಬರ್ 14ರಿಂದ ದೇಶಾದ್ಯಂತ ಬೆಲೆ ಏರಿಕೆ ಬಗ್ಗೆ ಜನ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ಚುನಾವಣೆ ಬಗ್ಗೆಯೂ‌ ಚರ್ಚೆ
ಮುಂದಿನ‌ ವರ್ಷದ ಮಾರ್ಚ್ – ಏಪ್ರಿಲ್ ತಿಂಗಳಲ್ಲಿ ಉತ್ತರ ಪ್ರದೇಶ (Uttar Pradesh), ಪಂಜಾಬ್ (Punjab) ಮಣಿಪುರ (Manipur) ಉತ್ತರ ಖಂಡ (Uttarkhand) ಮತ್ತು ಗೋವಾ (Goa) ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಪೈಕಿ‌ 2024ರ ಲೋಕಸಭಾ‌ ಚುನಾವಣೆಯ (2024 Lokasabha Election) ದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಈ‌ ವಿಧಾನಸಭಾ ಚುನಾವಣೆಗಳು ಭಾರೀ ಮುಖ್ಯವಾದವು. ಈ‌ ಹಿನ್ನೆಲೆಯಲ್ಲಿ ಅಕ್ಟೋಬರ್ 26ರ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಮುಂಬರುವ ಚುನಾವಣೆಗಳ ಬಗ್ಗೆಯೂ‌ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಎಐಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ (Congress Working Committee Meeting) ನಂತರ ಇದು ಕಾಂಗ್ರೆಸ್‌ನ ಎರಡನೇ ಪ್ರಮುಖ ಸಭೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ (AICC President Sonia Gandhi) ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ (Rahul Gandhi) ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಮೂಡಲಿದೆ ಎಂದು ತಿಳಿದುಬಂದಿದೆ. ಅಲ್ಲದೆ ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಪೂರಕವಾಗಿ ಸದಸ್ಯತ್ವ ನೊಂದಣಿ (Membership Registration) ಆಗಬೇಕಿದ್ದು ಆ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಬಹುತೇಕ ನವೆಂಬರ್ 1ರಿಂದ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ನೊಂದಣಿ ಆರಂಭವಾಗಲಿದೆ.

ಡಿ.ಕೆ. ಶಿವಕುಮಾರ್ ಗೈರು
ರಾಜ್ಯದ ಉಪ ಚುನಾವಣೆಗಳು ಮತ್ತು ಕುಟುಂಬದವರೊಬ್ಬರ ಅನಾರೋಗ್ಯದ ಕಾರಣದಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (KPCC President D.K. Shivakumar) ಇಂದಿನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದೇ ರೀತಿ ಮೇಘಾಲಯ, ಮಣಿಪುರ ಮತ್ತು ಮಧ್ಯಪ್ರದೇಶದ ರಾಜ್ಯಾಧ್ಯಕ್ಷರು ಸಭೆಗೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ತಿಳಿದುಬಂದಿದೆ. ಪಂಜಾಬ್‌ (Punjab) ಕಾಂಗ್ರೆಸಿನಲ್ಲಿ ವಿವಾದ ಎದ್ದು ಮಹತ್ವದ ಬದಲಾವಣೆ ಆದ ಬಳಿಕ‌ ಇದೇ ಮೊದಲ ಬಾರಿಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Punjab Congress President Navajoth Sing Sidhu) ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಈ ಹಿಂದೆ ನವಜೋತ್ ಸಿಂಗ್ ಸಿಧು ಅವರ ಭೇಟಿಗೆ ಸೋನಿಯಾ ಗಾಂಧಿ ಅವರು ಸಮಯಾವಕಾಶ ನೀಡಿರಲಿಲ್ಲ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *