Petrol-Diesel Price Today: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ನವದೆಹಲಿ: ನವೆಂಬರ್ 9 ಮಂಗಳವಾರ ಸತತ 6ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol, Diesel Prices Today)ಯನ್ನು ಪರಿಷ್ಕರಿಸಿಲ್ಲ. ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತಾ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಇಂಧನ ಬೆಲೆಗಳಲ್ಲಿ ಸ್ಥಿರತೆ ಕಂಡುಬಂದಿದೆ.
ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ(Petrol Price) ಲೀಟರ್ಗೆ 103.97 ರೂ. ಮತ್ತು ಡೀಸೆಲ್ನ ಬೆಲೆ ಲೀಟರ್ಗೆ 86.67 ರೂ. ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 109.98 ರೂ. ಮತ್ತು 94.14 ರೂ. ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 100.58 ರೂ. ಇದ್ದರೆ ಮತ್ತು ಡೀಸೆಲ್ ಬೆಲೆ 85.01 ರೂ. ಇದೆ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್(Diesel Price)ಕ್ರಮವಾಗಿ 104.67 ರೂ. ಮತ್ತು ₹89.79 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್ಗೆ 101.40 ರೂ. ಇದ್ದರೆ, ಡೀಸೆಲ್ 91.43 ರೂ. ಇದೆ. ಹೈದರಾಬಾದ್ನಲ್ಲಿ 1 ಲೀಟರ್ ಪೆಟ್ರೋಲ್ 108.20 ರೂ. ಮತ್ತು 1 ಲೀಟರ್ ಡೀಸೆಲ್ಗೆ 94.62 ರೂ. ಇದೆ. ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚವನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ದೇಶದ ಜನರಿಗೆ ಕೊಂಚ ರಿಲೀಫ್ ನೀಡಿದ್ದ ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂ. ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿತ್ತು. ಇದಾದ ಬೆನ್ನಿಗೆ ರಾಜ್ಯ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತಲಾ 7 ರೂ. ಕಡಿತಗೊಳಿಸಿತ್ತು. ಇದರಿಂದ ಜನಸಾಮಾನ್ಯರಿಗೆ ತುಸು ನೆಮ್ಮದಿ ಸಿಕ್ಕಂತಾಗಿದೆ.
ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರ(Fuel Rates)ಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.