ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟಕ್ಕೆ ತಂತ್ರ : ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ

ಹೈಲೈಟ್ಸ್‌:

  • ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟಕ್ಕೆ ತಂತ್ರ
  • ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ
  • ಸರಕಾರವನ್ನು ಮಾತಿ ಮೂಲಕ ಕಟ್ಟಿ ಹಾಕಲು ಸಜ್ಜು

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಪಕ್ಷದ ವಿರುದ್ಧ ಹೋರಾಟಕ್ಕೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಸುವರ್ಣಸೌಧದಲ್ಲಿ ಸಭೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸದನದಲ್ಲಿ ಯಾಯ್ಯಾವ ವಿಚಾರಗಳನ್ನು ಪ್ರಸ್ತಾಪಿಸಬೇಕು? ಎಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ. ಕಾಂಗ್ರೆಸ್ ಈಗಾಗಲೇ ಇದನ್ನು ವಿರೋಧಿಸಿದೆ. ವಿಧೇಯಕವನ್ನು ಸರ್ಕಾರ ಮಂಡಿಸಿದರೆ ಅದನ್ನು ಯಾವ ಸ್ವರೂಪದಲ್ಲಿ ವಿರೋಧ ಮಾಡಬೇಕು ಎಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಇನ್ನು ಬಿಟ್ ಕಾಯಿನ್ ಹಾಗೂ 40% ಆರೋಪದ ಬಗ್ಗೆಯೂ ಸಿಎಲ್ ಪಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಸದನದಲ್ಲಿ ಯಾವ ರೀತಿಯಲ್ಲಿ ಚರ್ಚೆ ಆಗಬೇಕು, ಯಾರೆಲ್ಲಾ ಮಾತನಾಡಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. 40% ಕಮಿಷನ್ ಆರೋಪವನ್ನು ಸದ್ಯ ಪ್ರಸ್ತಾಪ ಮಾಡದೆ ಮುಂದಿನ ವಾರದಲ್ಲಿ ಸದನದಲ್ಲಿ ಪ್ರಸ್ತಾಪ ಮಾಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.

ಇನ್ನು ಎಪಿಎಂಸಿ ಕಾಯ್ದೆ ವಾಪಸ್ ಗೆ ಆಗ್ರಹಿಸಿ ಕಾಂಗ್ರೆಸ್ ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡನೆ ಸಾಧ್ಯತೆ ಇದೆ. ಜೊತೆಗೆ ಭೂಸುಧಾರಣಾ ಕಾಯ್ದೆ ವಾಪಸ್ ಪಡೆಯಲು ಒತ್ತಾಯ ಮಾಡಲಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದು, ರಾಜ್ಯದಲ್ಲೂ ಕಾಯ್ದೆ ರದ್ದು ಮಾಡಲು ಕಾಂಗ್ರೆಸ್ ಆಗ್ರಹ ಮಾಡಲಿದೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್ ಪಾಟೀಲ್, ಪರಿಷತ್ ಸದಸ್ಯರಾದ ಸಿಎಂ ಇಬ್ರಾಹಿಂ, ಸಲೀಂ ಅಹ್ಮದ್, ಮಾಜಿ ಡಿಸಿಎಂ ಡಾ.‌ಜಿ ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *