ಡಿಕೆಶಿ ಬಗ್ಗೆ ಬಹಳ ಕಠೋರವಾಗಿ ಹೇಳುವನಿದ್ದೆ, ಆದ್ರೆ ಬಿಜೆಪಿ ನಾಯಕರಿಂದ ಫೋನ್ ಬಂದಿದೆ ಎಂದು ಮೌನಕ್ಕೆ ಜಾರಿದ ರಮೇಶ್ ಜಾರಕಿಹೊಳಿ!

ಬೆಳಗಾವಿ: ವಿಧಾನ ಪರಿಷತ್ ಮತದಾನಕ್ಕೆ ಕೊನೆಯ 4 ದಿನದಲ್ಲಿ ಬೆಳಗಾವಿ ರಾಜಕೀಯದಲ್ಲಿ ಬದಲಾವಣೆಯಾಗಿದೆ. ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ. ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ‘ಸಿದ್ದರಾಮಯ್ಯಗೆ ಭಯ ಶುರುವಾಗಿದೆ, ವೇಸ್ಟ್ ಬಾಡಿ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಗೋಕಾಕ್​ನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದರು.

ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಲಕ್ಷ್ಮೀ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ಪೋನ್ ಬಂದಿದೆ. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಎನೂ ಹೇಳಲ್ಲ. ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದು ಅವರು ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ನಮ್ಮ ನಡುವೆ ವಾರ್ ಆಗಲಿ, ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಬಂದ ಬಳಿಕ ಡಿಕೆ ಶಿವಕುಮಾರ್ ಬಗ್ಗೆ ಎಲ್ಲವನ್ನೂ ಹೇಳ್ತೆನಿ ಅಂತಾ ರಮೇಶ್‌ ಜಾರಕಿಹೊಳಿ ಹೇಳಿದ್ದರು‌.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಸಿದ್ದರಾಮಯ್ಯ ವೇಸ್ಟ್ ಬಾಡಿ ಎಂದ ರಮೇಶ್ ಜಾರಕಿಹೊಳಿ‌, ಹಿಂದುಳಿದವರ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ. ಸಿದ್ದರಾಮಯ್ಯ ವೇಸ್ಟ್ ಬಾಡಿ. ಸಿದ್ದರಾಮಯ್ಯರದ್ದು ಮುಗಿದ ಕಥೆ, ಮುಂದಿನ ಬಾರಿ ಸೋಲ್ತಾನೆ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿಯೇ ರಮೇಶ್ ವಾಗ್ದಾಳಿ ನಡೆಸಿದರು.

ನಮ್ಮ ಪಕ್ಷದಲ್ಲಿ ಎನಾಗಿದೆ ಎನಿಲ್ಲ ಎಂಬುದು ನಮ್ಮ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಯಾಕೆ ಸೋತಿದೆ ಎಂಬುದು ಚರ್ಚೆ ಮಾಡಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ‌. ಡಿಕೆ ಶಿವಕುಮಾರ್ ಬಗ್ಗೆ ಬಹಳ ಕಠೋರವಾಗಿ ಹೇಳುವವನಿದ್ದೆ. ಕೊನೆಯ ಮೂರು ದಿನಗಳಲ್ಲಿ ಜಿಲ್ಲೆಯ ಚಿತ್ರಣ ಬದಲಾಯಿತು. ಬಿಜೆಪಿಗೆ ಹೋಗುವ ಕುರಿತು ಲಖನ್ ಜಾರಕಿಹೊಳಿ‌ ತೀರ್ಮಾನ ತೆಗೆದುಕೊಳ್ಳಬೇಕು. ಲಖನ್ ಜಾರಕಿಹೊಳಿ‌ ಕೊನೆಯ ಮೂರು ದಿನ ನಮ್ಮ ಕೈಗೆ ಸಿಗಲಿಲ್ಲ‌. ಚುನಾವಣೆ ಚಿತ್ರಣ ಬದಲಾಗಿದ್ದಕ್ಕೆ ನಾನು ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಅವರು ಮಾಡಿದ್ರೂ ಪಕ್ಷೇತರ ಅಭ್ಯರ್ಥಿ ಲಖನ್ ಪ್ರಚಾರ ಮಾಡಿದರು.

ಸೋಲನ್ನ ರಮೇಶ್ ಜಾರಕಿಹೊಳಿ‌ ತಲೆಗೆ ಕಟ್ಟುತ್ತಿದ್ದಾರೆ ಎಂಬ ಪ್ರಶ್ನೆ ಎದುರಾಗಿದೆ. ಗುಡ್ಡಕ್ಕೆ ಶಕ್ತಿ ಹೊರುವ ತಾಕತ್ತು ಇದೆ ಬಿಡಿ. ಸಂಚು ನಡೆದಿರುವ ಬಗ್ಗೆ ಕನ್ಫರ್ಮ್ ಇಲ್ಲ, ವಿಚಾರ ಮಾಡಿ ಮಾತಾಡ್ತೇನಿ. ಸೋಲಿನ ಪಟ್ಟ ಕಟ್ಟಲು ಲೀಡರ್ ಆದವರಿಗೆ ಕಟ್ಟುತ್ತಾರೆ. ನಾನು ಕಾಂಗ್ರೆಸ್ ಸೋಲಿಸುತ್ತೇನೆ ಅಂತಾ ಹಠಕ್ಕೆ ಬಿದ್ದಿದ್ದು ನಿಜ. ಇವತ್ತು ಅವರ ಪಕ್ಷ ಗೆದ್ದಿದೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಎಲ್ಲಿ ತಪ್ಪಿದೆ ಎಂಬುದು ಆಂತರಿಕವಾಗಿ ಚರ್ಚೆ ಮಾಡುತ್ತೇವೆ. ಕೆಲವೇ ದಿನಗಳಲ್ಲಿ ಬಹಿರಂಗವಾಗಿ ಡಿಕೆಶಿ ಹೇಳಿಕೆ ಬಗ್ಗೆ ಕಠೋರ ಉತ್ತರ ಕೊಡ್ತೇನಿ ಎಂದು ನಿಗೂಢವಾಗಿ ಮಾತನಾಡುತ್ತಾ ರಮೇಶ್ ಹೇಳಿದರು.

ಈ ಮಧ್ಯೆ ‘ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲು ಡಿಕೆಶಿ ಕಾರಣ’ ಎಂಬ ಲಖನ್ ಜಾರಕಿಹೊಳಿ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸಿಎಂ ಎಲ್ಲ ಹೇಳಿದ್ದಾರೆ, ಯಾರು ಏನು ಮಾತಾಡಿದ್ದಾರೆ ಗೊತ್ತಿದೆ. ಈ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *