Morning Digest: ಒಕ್ಕಲಿಗರ ಸಂಘದ ಎಲೆಕ್ಷನ್ ರಿಸಲ್ಟ್ ಪ್ರಕಟ, ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ಪವರ್ ಕಟ್, ಬೆಳಗಿನ ಟಾಪ್ ನ್ಯೂಸ್ಗಳು
Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಬೆಂಗಳೂರು(ಡಿ.16): ರಾಜ್ಯ ಒಕ್ಕಲಿಗರ ಸಹಕಾರ ಸಂಘ(Karnataka State Vokkaliga Sangha)ದ ಚುನಾವಣೆಯ ಫಲಿತಾಂಶ(Election Result) ಬುಧವಾರ ತಡರಾತ್ರಿ ಹೊರಬಿದ್ದಿದೆ. ಸುಮಾರು 35 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ತಡರಾತ್ರಿವರೆಗೆ ಮತ ಎಣಿಕೆ(Vote Counting) ಮಾಡಲಾಗಿತ್ತು. ಹಲವು ಗೊಂದಲಗಳ ನಡುವೆ ಕೊನೆಗೂ ಫಲಿತಾಂಶ ಪ್ರಕಟವಾಗಿದೆ. ಅರಮನೆ ಮೈದಾನ(Palace Ground)ದಲ್ಲಿ ನಿನ್ನೆ ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಆರಂಭವಾಗಿ, ತಡರಾತ್ರಿ 12 ಗಂಟೆವರೆಗೆ ನಡೆದಿತ್ತು. ಬಳಿಕ ಮತ ಎಣಿಕೆ ಮುಕ್ತಾಯಗೊಂಡಿದ್ದು, ಚುನಾವಣಾಧಿಕಾರಿಗಳು ವಿಜೇತರ ಹೆಸರು ಘೋಷಣೆ ಮಾಡಿದ್ದಾರೆ. ತುಮಕೂರಿನ ಮಾಜಿ ಶಾಸಕ ನಾಗರಾಜಯ್ಯ ಅವರ ಪುತ್ರ ಲೋಕೇಶ್ ಡಿ.ನಾಗರಾಜಯ್ಯ ಸೇರಿ ಪ್ರಮುಖ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚನ್ನರಾಯಪಟ್ಟಣ ಶಾಸಕ ಸಿ.ಎನ್.ಬಾಲಕೃಷ್ಣ, ಬಿ.ಪಿ.ಮಂಜೇಗೌಡ ಸೇರಿ ಅನೇಕರು ಜಯ ಗಳಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಕೆಲ ಜಿಲ್ಲೆಗಳ ಫಲಿತಾಂಶ ಹೊರ ಬಿದ್ದಿತು.

ರಾಜ್ಯ ರಾಜಧಾನಿ ( State Capital)ಬೆಂಗಳೂರಿನ ( Bengaluru )ಜನರು ಚಳಿಯಿಂದ ಹೈರಾಣಾಗಿ ಹೋಗಿದ್ದಾರೆ.. ಜೊತೆಗೆ ಹಾಗಾಗ ಮಳೆ ಕಾಟ.ಮಳೆಯ ಜೊತೆಗೆ ಚಳಿಯು ಕೂಡ ಕಾಟ ಕೊಡಲು ಪ್ರಾರಂಭ ಮಾಡಿದೆ. ಇತ್ತ ಮನೆಯಲ್ಲಿ ರುಚಿರುಚಿಯಾದ ಅಡುಗೆ(Food)ಮಾಡಿಕೊಂಡು ತಿನ್ನೋಣ ಅಂದ್ರೆ ಬೆಲೆ ಏರಿಕೆಯ(Price Hike)ಬಿಸಿ ಶಾಕ್ ನೀಡುತ್ತಿದೆ..ಹೇಗಪ್ಪ ಇದರಿಂದ ರಕ್ಷಣೆ ಮಾಡಿಕೊಳ್ಳುವುದು ಅನ್ನುವ ಆತಂಕದಲ್ಲಿ ಇರುವ ರಾಜಧಾನಿ ಬೆಂಗಳೂರಿನ ಜನರಿಗೆ ಬೆಸ್ಕಾಂ(BESCOM)ಏರಿಕೆ ಮಾಡಲು ಮುಂದಾಗಿ ಶಾಕ್ ನೀಡಿದೆ.. ಇದು ಸಾಲದು ಅಂತ ಹಲವು ದಿನಗಳಿಂದ ನಿರಂತರವಾಗಿ ಕಾಮಗಾರಿಗಳ ಹೆಸರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಾ ಬಂದಿದೆ.. ಜೊತೆಗೆ ಇಂದು ಸಹ ಬೆಂಗಳೂರಿನ ಪಶ್ಚಿಮ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತ(Power Cut)ಮಾಡಲು ಬೆಸ್ಕಾಂ ನಿರ್ಧಾರ ಮಾಡಿದೆ.. ಹೀಗಾಗಿ ಗೃಹಿಣಿಯರು ಬೆಳಗ್ಗೆಯೇ ಅಡುಗೆ ಕೆಲಸವನ್ನು ಉಳಿಸಿಕೊಳ್ಳುವುದು ಸೂಕ್ತ ಜೊತೆಗೆ, ನಿಮ್ಮ ಮೊಬೈಲ್ ಚಾರ್ಜನ್ನು(Mobile charge)ಮುಂಚೆಯೇ ಮಾಡಿಕೊಳ್ಳುವುದು ಸೂಕ್ತ..

ತಮಿಳುನಾಡಿನ (Tamil Nadu ) ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ (IAF Chopper Crash) ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Group Captain Varun Singh) ನಿನ್ನೆ ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ (Bipin Rawat), ಅವರ ಪತ್ನಿ ಮಧುಲಿಕಾ ರಾವತ್ (Madhulika Rawat) ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಕ್ಯಾಪ್ಟನ್ ವರುಣ್ ಸಿಂಗ್(Varun Singh) ಹುತಾತ್ಮರಾಗಿದ್ದಾರೆ. ಕೊಟ್ಯಾಂತರ ಜನರ ಪ್ರಾರ್ಥನೆ ಕೊನೆಗೂ ಫಲಿಸಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಕ್ಯಾಪ್ಟನ್ ವರುಣ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ. ಶೇ.45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ (Commando Hospital) ಅಂದಿನಿಂದಲೂ ಚಿಕಿತ್ಸೆ ನೀಡಲಾಗುತ್ತಿತ್ತು. ಮೊದಲು ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು.ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಯಲಹಂಕ ಏರ್ ಬೇಸ್(Air Base)ಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥೀವ ಶರೀರ ರವಾನೆಯಾಗಲಿದೆ. ಬಳಿಕ ಯಲಹಂಕದಿಂದ ಭೂಪಾಲ್ ಗೆ ಪಾರ್ಥಿರ ಶರೀರ ರವಾನೆಯಾಗಲಿದೆ.

Petrol-Diesel Price Today: ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು 1 ಲೀಟರ್ ಪೆಟ್ರೋಲ್ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.

Gold Rate on Dec 16, 2021: ದೇಶದಲ್ಲಿಂದು ಚಿನ್ನದ ಬೆಲೆ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇತ್ತು. ಇಂದು 240 ರೂ. ಬೆಲೆ ಕಡಿಮೆಯಾಗಿದ್ದು, 46,910 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,150 ರೂ. ಇತ್ತು. ಇಂದು 240 ರೂ. ಬೆಲೆ ಕಡಿಮೆಯಾಗಿದ್ದು, 47,910 ರೂ. ಆಗಿದೆ.

ರಾಜ್ಯದಲ್ಲಿ ಮುಂಗಾರು(Monsoon) ಅಂತ್ಯವಾಗಿದ್ದರೂ ಅಕಾಲಿಕ ಮಳೆಯ ಆರ್ಭಟ ಇನ್ನೂ ಸಹ ನಿಂತಿಲ್ಲ. ಕಳೆದ ಎರಡು ವಾರದಿಂದ ವಿರಾಮ ನೀಡಿದ್ದ ಮಳೆರಾಯ (Rainfall) ಮತ್ತೆ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾನೆ. ಹೌದು, ಡಿಸೆಂಬರ್ 17ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ(SIK) ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಒಳನಾಡಿನಲ್ಲಿ(NIK) ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳಲ್ಲಿ ತಮಿಳುನಾಡು-ಪುದುಚೇರಿ-ಕಾರೈಕಲ್, ಕೇರಳ- ಮಾಹೆ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ದಕ್ಷಿಣ ಆಂಧ್ರಪ್ರದೇಶದಲ್ಲಿ ಪ್ರತ್ಯೇಕ/ಚದುರಿದ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ(Moderate Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಹೇಳಿದೆ.