ಇಂದು ಗೋವಾ ವಿಮೋಚನಾ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಗೋವಾ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಗೋವಾದ ತಾಲೀಗಾವೊದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ಮಾಹಿತಿ ನೀಡಿದೆ.
ಪಿಎಂಒ ಪ್ರಕಾರ, ಪ್ರಧಾನಮಂತ್ರಿಯವರು ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ಯೋಧರನ್ನು ಸನ್ಮಾನಿಸಲಿದ್ದಾರೆ.
ಪೋರ್ಚುಗೀಸ್ ಆಳ್ವಿಕೆಯಿಂದ ಗೋವನ್ನು ವಿಮೋಚನೆಗೊಳಿಸಿದ ಭಾರತೀಯ ಸಶಸ್ತ್ರ ಪಡೆಗಳು ಕೈಗೊಂಡ ‘ಆಪರೇಷನ್ ವಿಜಯ್’ ಯಶಸ್ಸನ್ನು ಗುರುತಿಸಲು ಪ್ರತಿ ವರ್ಷ ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನವನ್ನು ಆಚರಿಸಲಾಗುತ್ತದೆ.
ನವೀಕರಿಸಿದ ಫೋರ್ಟ್ ಅಗುಡಾ ಜೈಲ್ ಮ್ಯೂಸಿಯಂ, ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಬ್ಲಾಕ್, ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆ, ಮೋಪಾ ವಿಮಾನ ನಿಲ್ದಾಣದಲ್ಲಿ ಏವಿಯೇಷನ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಮತ್ತು ದಬೋಲಿಮ್-ನವೇಲಿಮ್, ಮರ್ಗೋವ್‌ನಲ್ಲಿ ಗ್ಯಾಸ್-ಇನ್ಸುಲೇಟೆಡ್ ಸಬ್‌ಸ್ಟೇಷನ್ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಅವರು ಗೋವಾದಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಟ್ರಸ್ಟ್‌ನ ಇಂಡಿಯಾ ಇಂಟರ್ನ್ಯಾಷನಲ್ ಯೂನಿವರ್ಸಿಟಿ ಆಫ್ ಲೀಗಲ್ ಎಜುಕೇಶನ್ ಮತ್ತು ರಿಸರ್ಚ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ.