High Court Jobs: 20 ಟೈಪಿಸ್ಟ್ ಹುದ್ದೆಗಳು ಖಾಲಿ, ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ
High Court Jobs: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್(Punjab and Haryana High Court)ನಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 20 ಸ್ಟೆನೊ ಟೈಪಿಸ್ಟ್(Steno Typist) ಹುದ್ದೆಗಳು ಖಾಲಿ ಇದ್ದು, ಎಂ.ಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 7, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು highcourtchd.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ |
ಹುದ್ದೆಯ ಹೆಸರು | ಸ್ಟೆನೊ ಟೈಪಿಸ್ಟ್ |
ಒಟ್ಟು ಹುದ್ದೆಗಳು | 20 |
ವಿದ್ಯಾರ್ಹತೆ | ಎಂ.ಎಸ್ಸಿ(ಸ್ನಾತಕೋತ್ತರ ಪದವಿ) |
ಉದ್ಯೋಗದ ಸ್ಥಳ | ಚಂಡೀಗರ್ |
ವೇತನ | ನಿಯಮಾನುಸಾರ |
ಅರ್ಜಿ ಸಲ್ಲಿಕೆ ವಿಧಾನ | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 20/12/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07/01/2022 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/01/2022
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು-500 ರೂ. ಅರ್ಜಿ ಶುಲ್ಕ
SC/ST/PWD/ಮಾಜಿ ಸೈನಿಕ ಅಭ್ಯರ್ಥಿಗಳು- 250 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ವಿದ್ಯಾರ್ಹತೆ:
ಸ್ಟೆನೊ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ:
ಸ್ಟೆನೊ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಸ್ಟೆನೊ ಟೈಪಿಸ್ಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಂಡೀಗರ್ನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಸ್ಟೆನೊ ಟೈಪಿಸ್ಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ