ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರಿಗೆ ಸಂಕಷ್ಟ ಎದುರಾಗಿದೆ. ಪನಾಮಾ ಪೇಪರ್ಸ್​ ಲೀಕ್​ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಮನ್ಸ್​ (ED Summons) ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (Enforcement Directorate) ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದೆ. 2016ರಿಂದಲೂ ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು (ಡಿ.20) ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಲಾಗಿದೆ. ಮುಂಬೈನಲ್ಲಿರುವ ಅವರ ‘ಪ್ರತೀಕ್ಷಾ’ ನಿವಾಸಕ್ಕೆ ಸಮನ್ಸ್​ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ದಾಖಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸೂಚಿಸಲಾಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಎರಡು ಬಾರಿ ಅವರು ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *