HDK Tweet: `ಕೈ’ ಪಾದಯಾತ್ರೆಗೆ ಟ್ವೀಟ್​ ಮೂಲಕ​ ಕುಟುಕಿದ `ದಳಪತಿ’: ಸುಳ್ಳಿನಯಾತ್ರೆಗೆ ಹೊರಟವರ ಜಾತಕ ಬೆತ್ತಲು ಮಾಡ್ತೀವಿ ಅಂತ ಲೇವಡಿ!

“ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ” ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ(H.D Kumaraswamy) ಟ್ವೀಟ್(Tweet) ಮಾಡಿದ್ದಾರೆ. ಇದು ಅವರು ಯಾರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ ಎಂದು ಹೇಳುವ ಅವಶ್ಯಕತೆ ಇಲ್ಲ. ಮೈತ್ರಿ ಸರ್ಕಾರದಲ್ಲಿದ್ದಾಗ ಕುಚಿಕು, ಕುಚಿಕು ಅಂತಿದ್ದ ಎಚ್​ಡಿಕೆ, ಇದೀಗ ಕಾಂಗ್ರೆಸ್(Congress)​ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಗೆಳೆಯ.. ಗೆಳೆಯ.. ಗೆಲುವೇ ನಮದಯ್ಯಾ ಅಂತಿದ್ದ ಎಚ್​ಡಿಕೆ(HDK), ಇದೀಗ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಯಾವಾಗ ಪತನವಾಯ್ತೋ ಅಂದಿನಿಂದಲೂ, ಕಾಂಗ್ರೆಸ್(Congress)​, ಜೆಡಿಎಸ್​(JDS) ನಾನೊಂದು ತೀರ.. ನೀನೊಂದು ತೀರ ಎಂಬಂತಾಗಿದೆ. ಕಾಂಗ್ರೆಸ್​​ನವರು ಜೆಡಿಎಸ್​ ಮೇಲೆ ಆರೋಪ ಮಾಡಿದರೆ, ಜೆಡಿಎಸ್​​ನವರು ಕಾಂಗ್ರೆಸ್​ ಅವರ ಮೇಲೆ ಪ್ರತ್ಯಾರೋಪ ಮಾಡುತ್ತಾರೆ. ಸದಾ ತಮ್ಮ ಟ್ವೀಟ್​ ಮೂಲಕವೇ ಕಾಂಗ್ರೆಸ್​ ಅವರನ್ನು ಕುಟುಕುವ ಕೆಲಸ ಮಾಡುವ ಎಚ್​ಡಿಕೆ ಇದೀಗ ಕಾಂಗ್ರೆಸ್​ ಪಾದಯಾತ್ರೆ ವಿರುದ್ಧ ಗರಂ ಆಗಿದ್ದಾರೆ. ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಗೆ ಕೈಗೊಂಡಿರುವ ಸಂಬಂಧ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪಾದಯಾತ್ರೆಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(D.K Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್​ ಮೂಲಕ ಕುಟುಕಿದ ‘ದಳಪತಿ’!

ಸರಣಿ ಟ್ವೀಟ್ ಮಾಡಿರುವ ಅವರು ಕರ್ನಾಟಕ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆಯನ್ನು ಟೀಕಿಸಿದ್ದಾರೆ. “ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ‘ಸತ್ಯ’ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ‘ಸುಳ್ಳು ಹೇಳಿ ಅಪಚಾರ’ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ” ಎಂದು ಹೇಳಿದ್ದಾರೆ.  ಮೇಕೆದಾಟು ಪಾದಯಾತ್ರೆ ಆರಂಭಿಸಲಿರುವ ಕಾಂಗ್ರೆಸ್ ನಾಯಕರು ಭಾನುವಾರ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರೊಂದಿಗೆ ಶ್ರೀ ಚಾಮರಾಜೇಶ್ವರನ ಆಶೀರ್ವಾದ ಪಡೆದಿದ್ದರು. ಇದನ್ನು ಟ್ವೀಟ್‌ನಲ್ಲಿ ಎಚ್‌ಡಿಕೆ ಉಲ್ಲೇಖಿಸಿದ್ದಾರೆ.

 

‘ಸುಳ್ಳಿನಯಾತ್ರೆ’ಗೆ ಹೊರಟವರು ಎಂದ ಎಚ್​ಡಿಕೆ! 

ಎಚ್​.ಡಿ. ಕುಮಾರಸ್ವಾಮಿ ಮತ್ತೊಂದು ಟ್ವೀಟ್​ನಲ್ಲಿ, “ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ‘ಸುಳ್ಳಿನ ಸರಮಾಲೆ’ಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ‘ರಾಜಕೀಯ ಹುಂಬತನ’ವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ‘ಸುಳ್ಳಿನಯಾತ್ರೆ’ಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ” ಎಂದು ಆರೋಪಿಸಿದ್ದಾರೆ.

ಟ್ವೀಟ್​ ಮಾಡುವ ಮೂಲಕ ತಿವಿದ ಎಚ್​ಡಿಕೆ!

ಸರಣಿ ಟ್ವೀಟ್ ಮಾಡುವ ಮೂಲಕ ಎಚ್​​.ಡಿ.ಕುಮಾರಸ್ವಾಮಿ ಕಾಂಗ್ರೆಸ್​ ಪಾದಯಾತ್ರೆ ವಿರುದ್ಧ ಗರಂ ಆಗಿದ್ದಾರೆ. ‘ಅಬ್ಬಾ..! ʼಸಿದ್ದಸುಳ್ಳುಶೂರ!!ʼ. ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-DPR ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಸಿಎಂ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು?. ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ?‘ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಕ್ಷಣಕ್ಕೊಂದು ಬಣ್ಣ ಬದಲಿಸುವವರು ಎಂದ ಕುಮಾರಸ್ವಾಮಿ!

ಕ್ಷಣಕ್ಕೊಂದು ಬಣ್ಣ ಬದಲಿಸುವ ಇವರ ನಿಜಬಣ್ಣ ಪಿ.ವಿ.ನರಸಿಂಹರಾವ್ ಪ್ರಧಾನಿ ಆಗಿದ್ದಾಗಲೇ ಕನ್ನಡಿಗರಿಗೆ ಅರಿವಾಗಿತ್ತು. ಬೆಂಗಳೂರಿಗೆ ಕಾವೇರಿ 4ನೇ ಹಂತದಲ್ಲಿ ನ್ಯಾಯಸಮ್ಮತವಾಗಿ ಧಕ್ಕಬೇಕಿದ್ದ 9 ಟಿಎಂಸಿ ನೀರನ್ನು ತಮಿಳುನಾಡು ಒತ್ತಡಕ್ಕೆ ಮಣಿದು ಸಾರಾಸಗಟಾಗಿ ನಿರಾಕರಿಸಿತ್ತು ಇದೇ ಕಾಂಗ್ರೆಸ್!

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *